ಉತ್ತಮ ಜನಪ್ರತಿನಿಧಿ ಆಯ್ಕೆಗೆ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡಿ- ಜಾವಗಲ್ ಶ್ರೀನಾಥ್ ಕರೆ.

Promotion

ಮೈಸೂರು,ಏಪ್ರಿಲ್,6,2023(www.justkannada.in): ಉತ್ತಮ ಜನಪ್ರತಿನಿಧಿ ಆಯ್ಕೆಗೆ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು  ಮೈಸೂರು ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಅಂತರರಾಷ್ಟ್ರೀಯ ಖ್ಯಾತಿಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ್ ಕರೆ ನೀಡಿದರು.

ಇಂದು ಮಾತನಾಡಿದ ಜಾವಗಲ್ ಶ್ರೀನಿವಾಸ್,  ಪ್ರಜಾಪ್ರಭುತ್ವ ವ್ಯವಸ್ಥೆ ಆರಂಭವಾಗುವುದೇ ಚುನಾವಣೆ ಮೂಲಕ. ಉತ್ತಮ ಜನಪ್ರತಿನಿಧಿಯ ಆಯ್ಕೆಗಾಗಿ ಪ್ರತಿಯೊಬ್ಬ ಮತದಾರರು ತಪ್ಪದೇ ಮತದಾನ ಮಾಡಲು ಮುಂದೆ ಬರಬೇಕು. ವಿಕಲಾಂಗ ಚೇತನರು ಹಾಗೂ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆಯಿಂದಲೇ ಮತದಾನ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ, ಜನರು ಇದರ ಸದುಪಯೋಗ ಪಡಿಸಿಕೊಳ್ಳಬೇಕು.

ಅದರಲ್ಲೂ ಪ್ರಮುಖವಾಗಿ ನಗರ ಪ್ರದೇಶದ ವಿದ್ಯಾವಂತ ಮತದಾರರು ಚುನಾವಣೆಯ ದಿನ ಮನೆಯಿಂದ ಹೊರಬಂದು ತಪ್ಪದೇ ಮತದಾನ ಮಾಡಬೇಕು ಎಂದು ಜಾವಗಲ್ ಶ್ರೀನಿವಾಸ್ ಹೇಳಿದರು.

Key words: mysore- Javagal Srinath – voter -vote – elect – good -representative.