ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆ ನಿಷೇಧಕ್ಕೆ ಕರ್ನಾಟಕ ಪ್ರಜಾಪಾರ್ಟಿ ಆಗ್ರಹ…

ಮೈಸೂರು,ಆ,17,2020(www.justkannada.in): ಬೆಂಗಳೂರಿನ ಕೆ.ಜಿ ಹಳ್ಳಿ ಮತ್ತು ಡಿ.ಜೆ ಹಳ್ಳಿಯಲ್ಲಿ ನಡೆದ ಗಲಭೆಯನ್ನ ಖಂಡಿಸಿರುವ ಕರ್ನಾಟಕ ಪ್ರಜಾಪಾರ್ಟಿ,  ಎಸ್.ಡಿ.ಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನ ನಿಷೇಧಿಸುವಂತೆ ಆಗ್ರಹಿಸಿದೆ.

ಮೈಸೂರು ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ಪ್ರಜಾಪಾರ್ಟಿ ರಾಜ್ಯಾಧ್ಯಕ್ಷ ಡಾ.ಬಿ.ಶಿವಣ್ಣ, ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳು ಸುಮಾರು ಹತ್ತಾರು ವರ್ಷಗಳಿಂದ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವುದನ್ನು ಹಾಗೂ ಸಮಾಜದಲ್ಲಿ ಕೋಮು ಗಲಭೆಗೆ ಪ್ರೋತ್ಸಾಹಿಸುತ್ತಿರುವುದನ್ನು ಪಕ್ಷವು ಖಂಡಿಸುತ್ತದೆ. ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತೇವೆ ಎಂದರು.mysore-karnataka-praja-party-ban-sdpi-and-pfi

ಈ ವಿಷಯಗಳನ್ನು ಮುಂದಿಟ್ಟುಕೊಂಡು ಓಟ್ ಬ್ಯಾಂಕ್ ರಾಜಕಾರಣ ಮಾಡುವ ಎಲ್ಲಾ ಪಕ್ಷಗಳ ಧೋರಣೆಯನ್ನು ವಿರೋಧಿಸುತ್ತೇವೆ . ಸರ್ಕಾರವು ಈ ವಿಷಯವನ್ನು ಸೂಕ್ಷ್ಮವಾಗಿ ಪರಿಗಣಿಸಿ ಆದಷ್ಟು ಬೇಗ ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನಕಾರ್ಯದರ್ಶಿ ಆದರ್ಶ ಬಿ , ಯೋಗೀಶ್ ಮತ್ತಿತರರು ಉಪಸ್ಥಿತರಿದ್ದರು.

Key words: mysore- Karnataka Praja Party-ban – SDPI and PFI