ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು: ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡಲು ಸಾಧ್ಯವಿಲ್ಲ- ಶಿಕ್ಷಣ ಸಚಿವ ಸುರೇಶ್ ಕುಮಾರ್…

ಮೈಸೂರು,ಫೆ,10,2020(www.justkannada.in):  ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವು ವಿಚಾರ, ಈ ಶೈಕ್ಷಣಿಕ ವರ್ಷದಲ್ಲಿ ಅದು ಸಾಧ್ಯವಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಪಠ್ಯದಿಂದ ಟಿಪ್ಪು ವಿಷಯ ಕೈ ಬಿಡುವು ವಿಚಾರ ಈ ಬಗ್ಗೆ ವಿಸ್ತೃತ ಚರ್ಚೆಯಾಗಬೇಕಿದೆ. ಈ ಬಗ್ಗೆ ಸಮಿತಿಯವರು ತಿಳಿಸಿದ್ದಾರೆ. ವಿಸ್ತೃತವಾದ ಇನ್ನೊಂದು ಸಮಿತಿ ಮಾಡಿ ಚರ್ಚೆ ಮಾಡಲಾಗುವುದು. ಈ ಬಾರಿ ಶಾಲೆಯ ಆರಂಭದ ದಿನದಿಂದಲೇ ಪುಸ್ತಕ ಸಮವಸ್ತ್ರ ನೀಡಲಾಗುವುದು. ಈ ಹಿನ್ನೆಲೆಯಲ್ಲಿ ಈ ಬಾರಿ ಪಠ್ಯದಿಂದ ಕೈ ಬಿಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಖಾತೆ ಹಂಚಿಕೆ ವಿಚಾರ. ಅದು‌ ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು, ಹೀಗಾಗಲೇ ಕೆಲವರಿಗೆ ಹೆಚ್ಚುವರಿ ಖಾತೆ ನೀಡಿದ್ದಾರೆ. ಇವತ್ತು ಮತ್ತಷ್ಟು ಖಾತೆ ಹಂಚಿಕೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಹಾ ವಿಸ್ತರಣೆ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಮೈಸೂರು ಭಾಗಕ್ಕೆ ಸಚಿವ ಸ್ಥಾನ ನೀಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸುರೇಶ್ ಕುಮಾರ್,  ಖಂಡಿತವಾಗಿಯೂ ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು. ಮೈಸೂರು ಅಭಿವೃದ್ದಿಗಾಗಿ ಇಲ್ಲಿಯವರಿಗೆ ಸಚಿವ ಸ್ಥಾನ ಸಿಗಬೇಕು. ಮುಂದಿನ ದಿನದಲ್ಲಿ ಅದು ಆಗಲಿದೆ ಎಂದರು.

ಪಕ್ಷದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ವಿಚಾರ. ಸಹಜವಾಗಿ ಎಲ್ಲರಿಗೂ ಈ ಬಗ್ಗೆ ಆಕಾಂಕ್ಷೆಯಿದೆ. ಕೆಲವರು ಮೂರು ನಾಲ್ಕು ಬಾರಿ ಗೆದ್ದವರಿದ್ದಾರೆ. ಅವರ ಜಿಲ್ಲೆಯ ಅಭಿವೃದ್ದಿಗಾಗಿ ಸಚಿವ ಸ್ಥಾನ ಕೇಳುವುದು ಸಹಜ ಎಂದು  ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದರು.

Key words: Mysore -ministerial position-Tippu- subject -cannot – dropped – Education Minister- Suresh Kumar