ಸಾ.ರಾ ಮಹೇಶ್ ಹಾಗೂ ಸಚಿವ ಎಸ್ ಟಿ ಸೋಮಶೇಖರ್  ಗೆ ತಿರುಗೇಟು: ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್.ವಿಶ್ವನಾಥ್.

Promotion

ಮೈಸೂರು,ಸೆಪ್ಟಂಬರ್,6,2021(www.justkannada.in): ಮೈಸೂರಿನಲ್ಲಿ ಸರ್ಕಾರಿ  ಭೂಮಿ ಮರುಸರ್ವೇ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಾ ರಾ ಮಹೇಶ್, ಸಚಿವ ಎಸ್ ಟಿ ಸೋಮಶೇಖರ್ ಹೇಳಿಕೆಗೆ ಬಿಜೆಪಿ ಎಂಎಲ್ ಸಿ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಹೆಚ್.ವಿಶ್ವನಾಥ್, ಚಿನ್ನ ಉಜ್ಜಿದಷ್ಟು ಹೊಳಪು ಬರುತ್ತದೆ. ಮರು ಸರ್ವೇ ನಡೆಯಲಿ. ಸತ್ಯ ಹೊರಬರಲಿ. ಸಾ. ರಾ ಮಹೇಶ್ ಒತ್ತುವರಿ ಮಾಡಿಲ್ಲವಾದರೆ ಭಯ ಏಕೆ ? ಒತ್ತುವರಿ ಮಾಡಿಕೊಂಡವರಿಗೆ ಸರ್ವೇಯ ಭಯವಿರುತ್ತದೆ. ಹಿಂದಿನ ಸರ್ವೇ ವರದಿ ಪ್ರಾಮಾಣಿಕವಾಗಿರಲಿಲ್ಲ. ಇದನ್ನು ನಾನು ಮೊದಲೇ ಹೇಳಿದ್ದೆ. ವರದಿ ಹೇಗೆ ನೀಡಿದರು ಅನ್ನೋದು ಜನರಿಗೂ ಗೊತ್ತಿದೆ ಎಂದು ಸಾ.ರಾ ಮಹೇಶ್ ಗೆ ಟಾಂಗ್ ನೀಡಿದರು.

ಇನ್ನು ಸಚಿವ ಎಸ್ ಟಿ ಸೋಮಶೇಖರ್ ಸರ್ಕಾರದ ಭಾಗ. ಅವರು ಈ ರೀತಿ ಹೇಳಿಕೆ ನೀಡಬಾರದು. ಅಧಿಕಾರಿಗೆ ಸರ್ಕಾರವೇ ಅಧಿಕಾರ ನೀಡಿದೆ. ಆ ಅಧಿಕಾರ ಬಳಸಿ ಅವರು ಆದೇಶ ಮಾಡಿದ್ದಾರೆ. ಇದನ್ನು ವಿರೋಧಿಸುವುದು ಸರಿಯಲ್ಲ ಎಂದು  ಹೆಚ್.ವಿಶ್ವನಾಥ್ ಹೇಳಿದರು.

ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅನ್ನುತ್ತಾರೆ

ಮೈಸೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕ್ರೆಡಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ  ಹಳ್ಳಿಹಕ್ಕಿ ಹೆಚ್. ವಿಶ್ವನಾಥ್, ಮುಂದೆ ಮೈಸೂರು ಕಟ್ಟಿಸಿದ್ದು ನಾನೇ ಅನ್ನುತ್ತಾರೆ. ಪ್ರತಾಪಸಿಂಹ ತಮ್ಮ ಸ್ಥಾನಕ್ಕೆ ಗೌರವವಿಟ್ಟು ಮಾತನಾಡಲಿ. ಅವರ ನೆನ್ನೆಯ ಪತ್ರವೂ ಸಂಸದರ ಸ್ಥಾನಕ್ಕೆ ಗೌರವ ತರುವ ಪತ್ರವಲ್ಲ. ಹಿಂದಿನ ಸರ್ಕಾರದಲ್ಲೇ ದಶಪಥ ರಸ್ತೆ ಯೋಜನೆಗೆ ದಾಖಲೆ ಇದೆ. ಹೀಗಾಗಿ ಯೋಜನೆ ತಮ್ಮದೇ ಅಂತಾ ಹೇಳಿಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

Key words: mysore- MLC- H. Vishwanath-against -MP Pratap simha-sa.ra Mahesh- minister –ST Somashekar