ಮತದಾರರಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಿ- ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಮನವಿ

ಮೈಸೂರು, ಸೆಪ್ಟಂಬರ್,27,2020(www.justkannada.in):  ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ 15ರಿಂದ 20 ಸಾವಿರ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟು ಹೋಗಿದೆ. ಹೀಗಾಗಿ ಮತದಾರರ ಪಟ್ಟಿಯಲ್ಲಿ ಹೆಸರಿರುವುದನ್ನು ಖಚಿತಪಡಿಸಿಕೊಳ್ಳುವಂತೆ ನಿವಾಸಿಗಳಿಗೆ ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಮನವಿ ಮಾಡಿದ್ದಾರೆ.jk-logo-justkannada-logo

ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ  15 ರಿಂದ 20 ಸಾವಿರ ಮತದಾರರ ಹೆಸರು ಪಟ್ಟಿಯಿಂದ ಬಿಟ್ಟು ಹೋಗಿದೆ. ಈ ಕ್ಷೇತ್ರದಲ್ಲಿ ದಿನಗೂಲಿ ಕಾರ್ಮಿಕರು, ಸಣ್ಣಪುಟ್ಟ ವ್ಯಾಪಾರ ಮಾಡಿಕೊಂಡು ಜೀವನ ನಡೆಸುವವರೇ ಹೆಚ್ಚು. ಅಲ್ಲದೆ ಅನಿವಾರ್ಯವಾಗಿ ಬಾಡಿಗೆ ಮನೆ ಬದಲಿಸಬೇಕಾಗುತ್ತದೆ. ಸಮೀಕ್ಷೆ ಸಂದರ್ಭದಲ್ಲಿ ಮನೆಯಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಅನೇಕರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಕಾರಣ  ಸಾವಿರಾರು ಮಂದಿ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎಂದು ಸಂದೇಶ್ ಸ್ವಾಮಿ ತಿಳಿಸಿದ್ದಾರೆ.mysore-nr-constituncy-bjp-leader-sandesh-swamy-appeals-voter

ಹಾಗೆಯೇ ಮುಂದಿನ ದಿನಗಳಲ್ಲಿ ಎಲ್ಲಾ ದಾಖಲೆಗೂ ಆಧಾರ್ ಜೋಡಣೆ ಮಾಡಿದರೆ ಸರ್ಕಾರಿ ಸೌಲಭ್ಯ ಪಡೆಯಲು ಮತದಾರರ ಚೀಟಿ ಅಗತ್ಯವಾಗಬಹುದು. ಹಾಗಾಗಿ ಎಲ್ಲಾ ಚುನಾವಣೆಯಲ್ಲೂ ಹಕ್ಕು ಚಲಾಯಿಸಲು ಹಾಗೂ ಸರ್ಕಾರಿ ಸವಲತ್ತು ಪಡೆದುಕೊಳ್ಳಲು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಮಾಡಿಸಿ ಸಂದೇಶ್ ಸ್ವಾಮಿ ಮನವಿ ಮಾಡಿದ್ದಾರೆ.

Key words: mysore- NR –Constituncy-BJP leader- Sandesh Swamy- appeals-voter