ಅ.11 ರಂದು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 104ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ  ರಾಷ್ಟ್ರಪತಿ ರಮಾನಾಥ್ ಕೋವಿಂದ್….

kannada t-shirts

ಮೈಸೂರು,ಅ,9,2019(www.justkannada.in): ಅಕ್ಟೋಬರ್ 11 ರಂದು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 104 ನೇ ಜಯಂತಿ ಕಾರ್ಯಕ್ರ ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್  ಕಾರ್ಯಕ್ರಮ ಉದ್ಘಾಟಿಸಿ ಸಮುಚ್ಚಯದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಿದ್ದಾರೆ ಎಂದು ಜೆಎಸ್ ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಮಂಜುನಾಥ್ ತಿಳಿಸಿದರು.

ಸುತ್ತೂರುಮಠದ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 104ನೇ ಜಯಂತಿ ಹಾಗೂ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ವತಿಯಿಂದ ಮೈಸೂರು ತಾಲೂಕಿನ ವರುಣಾ ಗ್ರಾಮದಲ್ಲಿ 101 ಎಕರೆ ವಿಶಾಲ ಪ್ರದೇಶದಲ್ಲಿ ತಲೆ ಎತ್ತಲಿರುವ ನೂತನ ಜಾಗತಿಕ ಮಟ್ಟದ ಸೌಲಭ್ಯಗಳುಳ್ಳ ಸಮುಚ್ಛಯಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಶುಕ್ರವಾರ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಈಗಾಗಲೇ ಮೈಸೂರು ನಗರದಲ್ಲಿರುವ ವೈದ್ಯಕೀಯ, ದಂತ, ಫಾರ್ಮಸಿ ಕಾಲೇಜು ಹೊರತುಪಡಿಸಿದರೆ, ಹೊಸ ಹೊಸ ಕೋರ್ಸ್ ಗಳು, ಮುಂದಿನ ಹತ್ತು ವರ್ಷಕ್ಕೆ ಬೇಕಾದ ವಿಷನ್ ರೂಪಿಸಿ ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆಯನ್ನಾಗಿ ಮಾಡಲು ತಯಾರಿ ನಡೆದಿದೆ.

ನಗರದಲ್ಲಿ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರುಮಠದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ. ಮಂಜುನಾಥ್ ಅವರು, ಅಂದು ಸಂಜೆ 4ಗಂಟೆಗೆ ವರುಣಾ ಗ್ರಾಮದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿ ಅವರುಗಳು ದಿವ್ಯಸಾನ್ನಿಧ್ಯವಹಿಸಲಿದ್ದಾರೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ 104ನೇ ಜಯಂತಿ ಉದ್ಘಾಟನೆ ಹಾಗೂ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ನೂತನ ಸಮುಚ್ಛಯ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದರು.

ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆವಹಿಸಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಸಾದ ದ್ವೆ`ಮಾಸಿಕ ವಿಶೇಷ ಸಂಚಿಕೆ ಹಾಗೂ ಎ ಜನರ್ಸ ಆಫ್ ಕ್ವಾಲಿಟಿ ಆ್ಯಂಡ್ ಎಕ್ಸಲೆನ್ಸ್ ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರುಮಠ, ಕುಲಪತಿ ಡಾ.ಎಚ್.ಬಸವನಗೌಡಪ್ಪ, ಕುಲಸಚಿವ ಡಾ.ಮಂಜುನಾಥ್ ಇದ್ದರು.

Key words: mysore- President -Ramanath Kovind –attends- Dr Shivaratri Rajendra Swamiji’s- 104th Jayanthi program

website developers in mysore