ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ನಿರ್ಧಾರ ಖಂಡಿಸಿ ಪ್ರತಿಭಟನೆ..

Promotion

ಮೈಸೂರು, ನವೆಂಬರ್,17,2020(www.justkannada.in): ರಾಜ್ಯದಲ್ಲಿ ಮರಾಠ ಪ್ರಾಧಿಕಾರ ರಚನೆಗೆ ಮುಂದಾಗಿರುವ ಬಿಜೆಪಿ ಸರ್ಕಾರದ ನಿರ್ಧಾರವನ್ನ ಖಂಡಿಸಿ ಮೈಸೂರಿನಲ್ಲಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.kannada-journalist-media-fourth-estate-under-loss

ಮೈಸೂರು ಜಿಲ್ಲಾಧಿಕಾರಿ ಕಛೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕೈ ಬಿಡುವಂತೆ  ಆಗ್ರಹಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕರ್ನಾಟಕದಲ್ಲಿ 50 ಕೋಟಿ ವೆಚ್ಚದಲ್ಲಿ ಮರಾಠ ಪ್ರಾಧಿಕಾರ ರಚನೆ ನಿರ್ಧಾರ ಸರಿಯಲ್ಲ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಕನ್ನಡಕ್ಕೆ ಕಂಟಕವಾಗಿರುವ ಮರಾಠ ಪ್ರಾಧಿಕಾರದ ರಚನೆ ಅವಶ್ಯಕತೆ ಇದೆಯೇ ಎಂಬುದರ ಕುರಿತು ಸರ್ಕಾರ ಆತ್ಮಾವಲೋಕನ ಮಾಡಿಕೊಳ್ಳಬೇಕು. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಮರಾಠಿಗರ ದೌರ್ಜನ್ಯ ದಿನೇ ದಿನೇ ಹೆಚ್ಚಾಗುತ್ತಿದೆ. ಆದ್ದರಿಂದ ಈ ಕೂಡಲೇ ಸರ್ಕಾರ ಮರಾಠ ಪ್ರಾಧಿಕಾರ ರಚನೆ ಕೈ ಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. mysore-Protest - decision - formation of Maratha Development Authority

ಪ್ರತಿಭಟನೆಯಲ್ಲಿ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ನಾಲಾಬೀದಿ ರವಿ ಸೇರಿದಂತೆ ವೇದಿಕೆ ಸದಸ್ಯರು ಭಾಗಿಯಾಗಿದ್ದರು.

Key words: mysore-Protest – decision – formation of Maratha Development Authority