‘ಉಳುವವರಿಗೆ ಭೂಮಿ, ಉಳ್ಳವರಿಗಲ್ಲ’: ರೈತರಿಂದ ಅರೆಬೆತ್ತಲೆ ಪ್ರತಿಭಟನೆ….

ಮೈಸೂರು,ಆ,8,2020(www.justkannada.in): ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಮೈಸೂರಿನಲ್ಲಿ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.jk-logo-justkannada-logo

ಮೈಸೂರಿನ ನ್ಯಾಯಾಲಯದ  ಮುಂಭಾಗ ಜಮಾಯಿಸಿದ ರೈತರು, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರು ಆಕ್ರೋಶ ವ್ಯಕ್ತಪಡಿಸಿದರು.mysore- protest- farmer- Land Reform Act -Amendment.

ನಮ್ಮೂರ ಭೂಮಿ ನಮಗಿರಲಿ, ಅನ್ಯರಿಗಲ್ಲ. ಉಳುವವರಿಗೆ ಭೂಮಿ, ಉಳ್ಳವರಿಗಲ್ಲ ಎಂದು ಘೋಷಣೆ ಕೂಗುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ರೈತರು, ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳನ್ನು ಜಾರಿಗೆ ತಂದು ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೃಷಿ ಭೂಮಿಯನ್ನು ಖಾಸಗೀಕರಣ ಮಾಡಿ ರೈತರಿಗೆ ಅನ್ಯಾಯ ಮಾಡಲು ಮುಂದಾಗಿದ್ದಾರೆ. ಕೂಡಲೇ ಈ ಎರಡೂ ಕಾಯ್ದೆಗಳ ತಿದ್ದುಪಡಿ ಕೈಬಿಡಬೇಕು. ಇಲ್ಲವಾದಲ್ಲಿ ಅಧಿವೇಶನ ಸಂಧರ್ಭದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ  ಹಾಕುವುದಾಗಿ ಎಚ್ಚರಿಕೆ ನೀಡಿದರು.

Key words: mysore- protest- farmer- Land Reform Act -Amendment.