ತಮಿಳುನಾಡು ಸಿಎಂ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ.

Promotion

ಮೈಸೂರು,ಜುಲೈ,6,2021(www.justkannada.in): ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆ, ತಮಿಳುನಾಡು ಸಿಎಂ ವಿರುದ್ಧ ಮೈಸೂರಿನಲ್ಲಿ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.jk

ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಮೈಸೂರು ಜಿಲ್ಲಾ ಕನ್ನಡ ಚಳುವಳಿಗಾರರ ಸಂಘದ ಕಾರ್ಯಕರ್ತರು, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ವಿರುದ್ಧ ಘೊಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಟಾಲಿನ್ ವ್ಯಂಗ್ಯಚಿತ್ರ ಪ್ರದರ್ಶಿಸಿ ಧರಣಿ ನಡೆಸಿದರು.

ತಮಿಳುನಾಡು ಗೊಡ್ಡು ಬೆದರಿಕೆಗೆ ರಾಜ್ಯ ಸರ್ಕಾರ ಹೆದರಬಾರದು. ಕೂಡಲೇ ಯೋಜನೆಯನ್ನ ಕೈಗೆತ್ತಿಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Key words: Mysore- protests -against -Tamil Nadu- CM-mekedatu plan