ರಂಗಾಯಣದಲ್ಲಿ ಭಾರತೀಯ ರಂಗಶಿಕ್ಷಣ ಕೇಂದ್ರ ಶಾಲಾ ಪ್ರಾರಂಭೋತ್ಸವ: ಡಾ.ವಿ.ನಾಗೇಶ್ ಬೆಟ್ಟಕೋಟೆ ಸೇರಿ ಹಲವರು ಭಾಗಿ….

ಮೈಸೂರು,ನವೆಂಬರ್,6,2020(www.justkannada.in): ಕೊರೋನಾ ನಡುವೆ ಮೈಸೂರು ರಂಗಾಯಣದಲ್ಲಿ ಮತ್ತೆ ರಂಗ ಶೈಕ್ಷಣಿಕ ಚಟುವಟಿಕೆ ಗರಿಗೆದರಿದ್ದು ಇಂದು ಭಾರತೀಯ ರಂಗಶಿಕ್ಷಣ ಕೇಂದ್ರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.mysore-rangayana-barathiya-ranga-shikshana-kendra-school-open-program

ರಂಗಾಯಣದ ಆವರಣದಲ್ಲಿ ನಡೆದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಕುಲಪತಿ ಡಾ.ವಿ.ನಾಗೇಶ್ ಬೆಟ್ಟಕೋಟೆ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಖ್ಯಾತ ರಂಗಕರ್ಮಿ ಪ್ರಕಾಶ್ ಬೆಳವಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ, ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ, ಭಾರತೀಯ ರಂಗಶಿಕ್ಷಣ ಕೇಂದ್ರ ಮುಖ್ಯಸ್ಥ  ಎಸ್. ರಾಮನಾಥ್ ಸೇರಿದಂತೆ ರಂಗಶಿಕ್ಷಣದ ವಿದ್ಯಾರ್ಥಿಗಳು ಭಾಗಿಯಾಗಿದ್ದರು.mysore-rangayana-barathiya-ranga-shikshana-kendra-school-open-program

ರಂಗಶಿಕ್ಷಣ ಕೋರ್ಸ್ ಗೆ ರಾಜ್ಯದ ವಿವಿಧ ಜಿಲ್ಲೆಗಳ 20 ಜನ ಪ್ರತಿಭಾವಂತ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ವಿದ್ಯಾರ್ಥಿಗಳಿಗೆ ಕೋರ್ಸ್ ಅವಧಿಯಲ್ಲಿ ರಂಗಭೂಮಿಯ ಹಲವು ವಿಭಾಗಗಳ ಪರಿಚಯ ಮಾಡಲಾಗುತ್ತದೆ. ಅಭಿನಯದ ಜೊತೆ ರಂಗಮಂಚದ ತೆರೆ ಹಿಂದಿನ ವಿಭಾಗಗಳ ಕುರಿತು ಮಾಹಿತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಬೆಳಕು, ಸಂಗೀತ, ವಸ್ತ್ರ ವಿನ್ಯಾಸದ ಕುರಿತು ವಿದ್ಯಾರ್ಥಿಗಳಿಗೆ ಪರಿಚಯ ಮಾಡಲಾಗುತ್ತದೆ.

Keyw words: mysore- rangayana-barathiya ranga shikshana Kendra-school- open- Program