ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ.

ಮೈಸೂರು,ಡಿಸೆಂಬರ್,20,2021(www.justkannada.in):  ಮೈಸೂರಿನ ರಂಗಾಯಣದ ನಿರ್ದೇಶಕರಾಗಿರುವ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಒತ್ತಾಯಿಸಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.

ಮೈಸೂರಿನ‌ ಕಲಾಮಂದಿರದ ಆವರಣದಲ್ಲಿರುವ ರಂಗಾಯಣದ ಮುಖ್ಯದ್ವಾರದಲ್ಲಿ ರಂಗಾಯಣ ಉಳಿಸಿ ಹೋರಾಟ ಸಮಿತಿ ಸದಸ್ಯರು ಧರಣಿ ನಡೆಸಿ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ವಜಾಗೊಳಿಸುವಂತೆ ಒತ್ತಾಯಿಸಿದರು.

ರಂಗಾಯಣದ ನಿರ್ದೇಶಕ ಅಢ್ಡಂಡ ಕಾರ್ಯಪ್ಪನವರು ಬಲಪಂಥೀಯ ಚಿಂತನೆಗಳನ್ನು ಬಲವಂತವಾಗಿ ಹೇರುತ್ತಿದ್ದಾರೆ. ರಾಜಕೀಯ ಪಕ್ಷದ ವಕ್ತಾರರಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ಮನುವಾದಿ ಮನಸ್ಥಿತಿಯ ಅಡ್ಡಂಡ ಕಾರ್ಯಪ್ಪ ಅವರನ್ನು‌ಕೂಡಲೇ ಸೇವೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.

ಪ್ರಗತಿಪರ ಚಿಂತಕರು, ರಂಗಾಸಕ್ತರು, ರಂಗಕರ್ಮಿಗಳು, ಹವ್ಯಾಸಿ ರಂಗಭೂಮಿ ಕಲಾವಿದರು, ಸಾಹಿತಿಗಳು, ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಾಜ್ಯ ರೈತಸಂಘ, ಕರ್ನಾಟಕ ಕಾವಲು ಪಡೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು, ರಂಗಾಯಣದ ಮಾಜಿ ನಿರ್ದೇಶಕರಾದ ಬಸವಲಿಂಗಯ್ಯ, ಜನಾರ್ಧನ್ (ಜನ್ನಿ) ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Key words: mysore- rangayana-director- dismissal- demanding- protest