ಮೈಸೂರಿಗೆ ಪಾಸಿಟಿವ್ ಪ್ರಕರಣ ಆಧರಿಸಿ ಹೆಚ್ಚುವರಿ ಆಕ್ಸಿಜನ್‌ ಗೆ ಮನವಿ- ಸಚಿವ ಎಸ್.ಟಿ ಸೋಮಶೇಖರ್…

Promotion

ಮೈಸೂರು,ಮೇ,10,2021( www.justkannada.in): ಮೈಸೂರಿಗೆ ಇನ್ನು ಹೆಚ್ಚುವರಿ ಆಕ್ಸಿಜನ್ ಅವಶ್ಯಕತೆ ಇದೆ. ಹೀಗಾಗಿ ನಮ್ಮಲ್ಲಿ ಪಾಸಿಟಿವ್ ಪ್ರಕರಣ ಕರೋನಾ ರೋಗಿಗಳ ಸಂಖ್ಯೆ ಆಧರಿಸಿ ಹೆಚ್ಚುವರಿ ಆಕ್ಸಿಜನ್‌ ಗೆ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.jk

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ  ಸಚಿವ ಎಸ್ ಟಿ ಸೋಮಶೇಖರ್, ನಮ್ಮ ಕೋಟಾದ ಆಕ್ಸಿಜನ್ ಪ್ರಮಾಣವನ್ನ ಸರ್ಕಾರ ಬಳಿ ಕೇಳಿದ್ದೇನೆ. ನಮಗೆ ಆಕ್ಸಿಜನ್ ಖೋಟಾ ಹೆಚ್ಚಾಗಬಹುದು. ಹೆಚ್ಚುವರಿ ಆಕ್ಸಿಜನ್‌ಗೆ ಮನವಿ ಮಾಡಿದ್ದೇನೆ ಎಂದರು.

ಹೊರ ಜಿಲ್ಲೆಗಳ ಪ್ರಯಾಣಿಕರು ಸೋಂಕಿತರಿಗೂ ಮೈಸೂರಿಗೆ ಪ್ರವೇಶವಿಲ್ಲ….

ಅಂತರ್ ಜಿಲ್ಲಾ ಓಡಾಟ ಇಲ್ಲದ  ಕಾರಣ‌ ಬೇರೆ ಜಿಲ್ಲೆಗಳಿಂದ ಮೈಸೂರಿಗೆ ಬರುವ ಕರೋನಾ ರೋಗಿಗಳ ಸಂಖ್ಯೆ ಕಡಿಮೆ ಆಗಲಿದೆ. ಹೊರ ಜಿಲ್ಲೆಗಳ ಪ್ರಯಾಣಿಕರು ಸೋಂಕಿತರಿಗೂ ಮೈಸೂರಿಗೆ ಪ್ರವೇಶವಿಲ್ಲ. ಕೊನೆ ಕ್ಷಣದಲ್ಲಿ ಸೋಂಕಿತರು ಮೈಸೂರಿಗೆ ಬರುತ್ತಿದ್ದಾರೆ. ಇದರಿಂದ ಹೆಚ್ಚಿನ ಸಾವು‌ ನೋವುಗಳಾಗುತ್ತಿವೆ. ಆದ್ದರಿಂದ ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ನಿರ್ಬಂಧ ಹೇರಲಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

Key words: Mysore- requests- additional –oxygen- based – positive case-Minister- ST Somashekhar.