‘ಮೀಸಲಾತಿ’ ಅಖಾಡಕ್ಕಿಳಿದ ಮತ್ತೊಂದು ಸಮುದಾಯ…..

ಮೈಸೂರು,ಫೆಬ್ರವರಿ,22,2021(www.justkannada.in):  ರಾಜ್ಯದಲ್ಲಿ ಎಸ್ಟಿ ಮೀಸಲಾತಿ ಹೋರಾಟ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಸಮುದಾಯ ಮೀಸಲಾತಿ ಅಖಾಡಕ್ಕಿಳಿದೆ.jk

ಎಸ್ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಡಿವಾಳ ಸಮುದಾಯದ ಮುಖಂಡರು ಚಿತ್ರದುರ್ಗ ಮಡಿವಾಳ ಮಾಚಿದೇವ ಸಂಸ್ಥಾನ ಮಠದ ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ ಅವರ ನೇತೃತ್ವದಲ್ಲಿ  ಇಂದು ಮೈಸೂರಿನಲ್ಲಿ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಮಡಿವಾಳ ಸಮುದಾಯದಿಂದ ಹೋರಾಟದ ಬಗ್ಗೆ ರೂಪುರೇಷೆ ಬಗ್ಗೆ ಚರ್ಚಿಸಿದರು.mysore-reservation-another-community-madivala-community

ಸಭೆಯಲ್ಲಿ ಈ ಕುರಿತು ಮಾತನಾಡಿದ ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಎಸ್ಟಿ ಮೀಸಲಾತಿ ನೀಡುವಂತೆ ಕಳೆದ 40 ವರ್ಷಗಳಿಂದ ಒತ್ತಾಯ ಮಾಡುತ್ತಲೇ ಇದ್ದೇವೆ ಆದರೂ ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ದೇಶದ 18 ರಾಜ್ಯಗಳಲ್ಲೂ ಮೀಸಲಾತಿ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ನಮಗೆ ಸವಲತ್ತು ಸಿಗುತ್ತಿಲ್ಲ. ನಮ್ಮ ಸಮುದಾಯದಲ್ಲಿ ಯಾವೊಬ್ಬ ರಾಜಕಾರಣಿಯು ಇಲ್ಲ, ಒಬ್ಬ ಎಂಪಿ, ಎಂ.ಎಲ್.ಎ ಸಹ ಇಲ್ಲ. ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾದಾನ್ಯತೆ ಸಿಕ್ಕಿಲ್ಲ. ಈ ಹಿನ್ನೆಲೆ ಇದೆ ಫೆಬ್ರವರಿ 24ಕ್ಕೆ ಚಿತ್ರದುರ್ಗದಲ್ಲಿ ನಮ್ಮ ಸಮುದಾಯದ ಮುಖಂಡರ ಸಭೆ ನಡೆಯಲಿದೆ. ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದರು.

Key words: mysore-Reservation – another community –madivala community