ಭವಿಷ್ಯ ಹೇಳುವುದನ್ನ ಬದಿಗಿಟ್ಟು ಬ್ಯಾಟ್ ಹಿಡಿದ ಜ್ಯೋತಿಷಿಗಳು: ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ…

Promotion

ಮೈಸೂರು,ಜು,27,2019(www.justkannada.in): ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಕರ್ನಾಟಕ ರಾಜ್ಯ ಪುರೋಹಿತರ ಹಾಗೂ ಜ್ಯೋತಿಷಿಗಳ ಕ್ರಿಕೆಟ್ ಪಂದ್ಯಾವಳಿ ಗೆ ಚಾಲನೆ ನೀಡಲಾಯಿತು.

ಮೈಸೂರಿನ ಮಾನಂದವಾಡಿ ರಸ್ತೆಯಲ್ಲಿರುವ ರೈಲ್ವೆ ವರ್ಕ್ ಷಾಪ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಪುರೋಹಿತರ ಹಾಗೂ ಜ್ಯೋತಿಷಿಗಳಿಗಾಗಿ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜಿಸಲಾಗಿದೆ.  ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಟು ಜಾವಗಲ್ ಶ್ರೀನಾಥ  ಅವರು ಬ್ಯಾಟಿಂಗ್ ಆಡುವ ಮೂಲಕ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದರು.

ಕ್ರಿಕೆಟ್ ಪಂದ್ಯಾವಳಿಯಲ್ಲಿ 16 ತಂಡಗಳು ಭಾಗಿಯಾಗಿವೆ. ಈ ಮೂಲಕ ಭವಿಷ್ಯ ಹೇಳುವ ಜ್ಯೋತಿಷಿಗಳು ಭವಿಷ್ಯ ಬದಿಗೊತ್ತಿ ಬ್ಯಾಟ್ ಬಾಲ್ ಹಿಡಿದು ಮೈದಾನಕ್ಕಿಳಿದಿದ್ದಾರೆ.

Key words: mysore- State- priests – astrologers- cricket tournament