ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲಿಸಿ ಮೈಸೂರಿನಲ್ಲಿ ಬಲ ಪ್ರದರ್ಶನ: ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ….

Promotion

ಮೈಸೂರು,ಡಿ,22,2019(www.justkannada.in): ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರ ಮತ್ತು ವಿರೋಧಗಳು ವ್ಯಕ್ತವಾಗಿವೆ. ಈ ನಡುವೆ ಸಿಎಎ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆದು ಹಿಂಸಾಚಾರಕ್ಕೆ ತಿರುಗಿತ್ತು. ಇದೀಗ ಕಾಯ್ದೆ ಬೆಂಬಲಿಸಿ ಬಿಜೆಪಿ ತನ್ನ ಶಕ್ತಿ ಪ್ರದರ್ಶಿಸುತ್ತಿದೆ.

ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ವ್ಯಕ್ತಪಡಿಸಿ ಮೈಸೂರಿನಲ್ಲಿ ಬಲ ಪ್ರದರ್ಶನ ಮಾಡಲಾಗಿಯಿತು. ಮೈಸೂರಿನ ಓವೆಲ್ ಮೈದಾನದಲ್ಲಿ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಜಮಾವಣೆಯಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ, ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು. ಈ ವೇಳೆ  ಶಾಸಕ ಎಸ್.ಎ ರಾಮದಾಸ್, ಮಾಜಿ ಶಾಸಕ ತೋಂಟದಾರ್ಯ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶಕ್ತಿ ಪ್ರದರ್ಶನ ಹಿನ್ನೆಲೆ ಓವೆಲ್ ಮೈದಾನದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Key words: Mysore – support – Citizenship Amendment Act-bjp