ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ಕಲುಶಿತ ನೀರು ಕುಡಿದು 15ಕ್ಕೂ ಹೆಚ್ಚು ಜನ ಅಸ್ವಸ್ಥ

ಮೈಸೂರು, ನವೆಂಬರ್, 24, 2019 (www.justkannada.in): ಕಲುಶಿತ ನೀರು ಸೇವನೆಯಿಂದ ಗ್ರಾಮಸ್ಥರು ಆರೋಗ್ಯದಲ್ಲಿ ವ್ಯತ್ಯಯವಾಗಿದೆ.

ಮೈಸೂರು ತಾಲೂಕಿನ ಹಡಜನ ಗ್ರಾಮದಲ್ಲಿ ಕಲುಶಿತ ನೀರು ಪೂರೈಕೆಯಾಗಿ ಈ ಅವಘಡ ಸಂಭವಿಸಿದೆ. ದೇವಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಡಜನ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕಳೆದ 15 ದಿನಗಳಲ್ಲಿ ಗ್ರಾಮಸ್ಥರ ಆರೋಗ್ಯದಲ್ಲಿ ಏರುಪೇರಾಗಿದೆ. 15ಕ್ಕೂ ಹೆಚ್ಚು ಜನರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
ಆದರೆ ಕಂಡು ಕಾಣದಂತೆ ಗ್ರಾಮಪಂಚಾಯ್ತಿ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಟ್ಯಾಂಕ್ ನೀರು ಕುಡುಯಲು ಯೋಗ್ಯವಲ್ಲ ಎಂದು ಅರೋಗ್ಯಾಧಿಕಾರಿಗಳು ವರದಿ ನೀಡಿಧದರು ಕ್ರಮ ಕೈಗೊಳ್ಳದ ಅಧಿಕಾರಿಗಳು ಗ್ರಾಮಪಂಚಾಯಿತಿ ಅಧಿಕಾರಿಗಳ ಕ್ರಮ  ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.