ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಕೇಸ್: ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ತನಿಖೆ ನಡೆಸಿ ವರದಿ ನೀಡಲಿ- ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್…

Promotion

ಮೈಸೂರು,ನ,21,2019(www.justkannada.in): ಶಾಸಕ ತನ್ವೀರ್ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ತನಿಖೆ ನಡೆಸಿ ವರದಿ ನೀಡಲಿ ಎಂದು ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್ ತಿಳಿಸಿದರು.

ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ  ಭೇಟಿ ನೀಡಿ ಶಾಸಕ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಿದ ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ , ತನ್ವೀರ್ ಸೇಠ್ ಕುಟುಂಬಸ್ಥರ ಜೊತೆ ಧೈರ್ಯ ತುಂಬಿದರು.

ಬಳಿಕ ಮಾತನಾಡಿದ ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್, ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಖಂಡನೀಯ. ಈ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆ ಹಾಗೂ ಸರ್ಕಾರ ಕ್ರಮವಹಿಸಿದೆ. ಈ ಬಗ್ಗೆ ನಾನೂ ಕೂಡಾ ಸರ್ಕಾರಕ್ಕೆ ಆಗ್ರಹಿಸುತ್ತೇನೆ. ತನಿಖೆ ವಿಚಾರಣೆ ಹಂತದಲ್ಲಿರುವಾಗ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸರ್ಕಾರ ಯಾವುದೇ ಮುಲಾಜಿಗೆ ಒಳಗಾಗದೆ ತನಿಖೆ ನಡೆಸಿ ವರದಿ ನೀಡಲಿ ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯಗೆ ಬೆಂಬಲ ಇಲ್ಲ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್,  ಟೀಕೆಗಳಿಗೆ ಉತ್ತರ ಕೊಡುವ ಸಾಮರ್ಥ್ಯ ಸ್ವತಃ ಸಿದ್ದರಾಮಯ್ಯರಿಗೆ ಇದೆ. ಸಿದ್ಧರಾಮಯ್ಯರನ್ನ ಯಾರಾದರೂ ಟೀಕೆ ಮಾಡಿದರೇ ಅದಕ್ಕೆ ಅವರೇ ಉತ್ತರ ಕೊಡುತ್ತಾರೆ. ಹಾಗೂ ನಾವುಗಳು ಕೂಡ ಅವರ ಬೆಂಬಲಕ್ಕೆ ನಿಂತಿದ್ದೇವೆ. ಮುಂದೆಯು ನಿಲ್ಲುತ್ತೇವೆ ಅವರು ನಮ್ಮ ನಾಯಕರು. ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ.ಆದ್ರೆ ಎಷ್ಟು ಸ್ಥಾನ ಎಂಬುದನ್ನು ಮುಂದಿನ ತಿಂಗಳು 5ನೇ ತಾರೀಖಿನಂದು ಹೇಳುತ್ತೇನೆ ಎಂದು ತಿಳಿಸಿದರು.

Key words: mysore-Tanveer Seth-health-  government- investigate – report -Former DCM -Dr G Parameshwar.