ಮೈಸೂರಿನಲ್ಲಿ ಟಿಪ್ಪರ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ..

ಮೈಸೂರು,ಆಗಸ್ಟ್,31,2020(www.justkannada.in): ಟಿಪ್ಪರ್ ಲಾರಿ ಮತ್ತು ಬಸ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಾಹನ ಜಖಂ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk-logo-justkannada-logo

ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆ ವೇಳೆ ವಾಹನದಲ್ಲಿದ್ದ  ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಬಸ್ ನಲ್ಲಿದ್ದ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ವೇಳೆ ಎರಡೂ ವಾಹನಗಳು ಸಂಪೂರ್ಣ ಜಖಂ ಆಗಿವೆ.mysore-tipper-bus-collision

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದು ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- Tipper- Bus – Collision