ಮೈಸೂರು ಅರಮನೆಯಲ್ಲಿ ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ: ಇಂದು ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ…

ಮೈಸೂರು,ಸೆ,24,2019(www.justkannada.in): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಇನ್ನ ಕೆಲವೇ ದಿನಗಳು ಬಾಕಿ ಇದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆಯಲ್ಲಿ ಆಚರಿಸುವ ಸಾಂಪ್ರದಾಯಿಕ ದಸರಾಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ರಾಜಮನೆತನದ ಸಾಂಪ್ರದಾಯಿಕ ಕಾರ್ಯಕ್ರಮ ಖಾಸಗಿ ದರ್ಬಾರಿಗೆ  ಅರಮನೆಯಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು ಇಂದು ಶುಭ ಲಗ್ನದಲ್ಲಿ ಅರಮನೆಯ ದರ್ಬಾರ್ ಹಾಲ್ ನಲ್ಲಿ ಚಿನ್ನದ ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ.  ರಾಜವಂಶಸ್ಥೆ ಪ್ರಮೋದಾದೇವಿ ದೇವಿ ಒಡೆಯರ್ ಅವರ ನೇತೃತ್ವದಲ್ಲಿ ಚಿನ್ನದ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ.

ಚಿನ್ನದ ಸಿಂಹಾಸನ ಜೋಡಣೆ ಮಾಡಲಿರುವ ಹಿನ್ನೆಲೆ, ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಸಿಂಹಾಸನ ಜೋಡಣೆಯ ವೇಳೆ ಐತಿಹಾಸಿಕ ಹಿನ್ನೆಲೆಯ ಅರಮನೆಯಲ್ಲಿ ನವಗ್ರಹ, ಗಣ ಹೋಮ ಮಾಡಿ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಸೆಪ್ಟೆಂಬರ್ 29ರಿಂದ ರಾಜಮನೆತನದ ದಸರಾ ಖಾಸಗಿ ದರ್ಬಾರ್ ನಡೆಯಲಿದೆ.

ಖಾಸಗಿ ದರ್ಬಾರ್ ರಾಜಮನೆತನದ ಪ್ರಮುಖ ಧಾರ್ಮಿಕ ಕಾರ್ಯವಾಗಿದ್ದು, ದರ್ಬಾರ್ ಹಾಲ್‍ನಲ್ಲಿ ರತ್ನ ಖಚಿತ ಸಿಂಹಾಸನದ ಮೇಲೆ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಳಿತು ದರ್ಬಾರ್ ನಡೆಸಲಿದ್ದಾರೆ. ಸೆ.29ರಿಂದ ಅ.7ರವರೆಗೆ ಅರಮನೆಯಲ್ಲಿ ವಿವಿಧ ಧಾರ್ಮಿಕ ಕಾರ್ಯ ಜರುಗಲಿದ್ದು, ಪ್ರತಿ ದಿನ ಸಂಜೆ ಖಾಸಗಿ ದರ್ಬಾರ್ ನಡೆಯಲಿದೆ.

Key words: Mysore –traditional-dasara-  mysore palace- jeweled throne