ಮೈಸೂರು ವಿವಿ ಕ್ಯಾಂಪಸ್ ನಲ್ಲಿ ಕೋವಿಡ್ ಕೇರ್ ಸೆಂಟರ್ : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

 

ಮೈಸೂರು, ಅಕ್ಟೊಬರ್,07,2020 : (www.justkannada.in news ) ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಕ್ಯಾಂಪಸ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಈ ಕುರಿತು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.

ಬುಧವಾರ ವಿಜ್ಞಾನಭವನದಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯ ಕಾರ್ಯಸೂಚಿ ಶಿಕ್ಷಣ ಮಂಡಳಿಯ ವಿಶೇಷ ಸಭೆಯಲ್ಲಿ ಈ ಬಗ್ಗೆ ಪ್ರೊ.ಜಿ.ಹೇಮಂತ್ ಕುಮಾರ್ ಮಾಹಿತಿ ನೀಡಿದರು.

jk-logo-justkannada-logo

ಪ್ರೊ.ಜಿ.ವೆಂಕಟೇಶ್ ಕುಮಾರ್ ಮಾತನಾಡಿ, ನವೆಂಬರ್ 1 ರಿಂದ ಕಾಲೇಜುಗಳು ಆರಂಭವಾಗುವ ಸಾಧ್ಯತೆಯಿದೆ. ಮೈಸೂರು ವಿವಿ ವ್ಯಾಪ್ತಿಯಲ್ಲಿ ಮಹಾರಾಜ ಕಾಲೇಜು, ಯುವರಾಜ ಕಾಲೇಜು ಹಾಗೂ ಮಾನಸಗಂಗೋತ್ರಿಯಲ್ಲಿ ಒಟ್ಟು 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೋವಿಡ್ ಕೇರ ಸೆಂಟರ್ ಆರಂಭಿಸುವುದು ಹಾಗೂ ಒಂದು ಅಬ್ಯುಂಲೆನ್ಸ್ ವ್ಯವಸ್ಥೆ ಮಾಡುವುದು ಉತ್ತಮ ಎಂದು ಸಲಹೆ ನೀಡಿದರು.

ಇದಕ್ಕೆ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಪ್ರತಿಕ್ರಿಯಿಸಿ, ಈ ಕುರಿತು ಈಗಾಗಲೇ ಚರ್ಚಿಸಿದ್ದು, ಶೀಘ್ರವೇ ಕೋವಿಡ್ ಕೇರ್ ಸೆಂಟರ್ ಆರಂಭಿಸುವುದಾಗಿ ತಿಳಿಸಿದರು.

Mysore-university-covid-center-at-campus-vc-hemanth.kumar

ಕೊರೊನಾ ಆತಂಕದ ನಡುವೆಯೂ ಪ್ರವೇಶ ಶುಲ್ಕವನ್ನು ಕಟ್ಟುವುದಕ್ಕಾಗಿ ವಿವಿಯ ಬ್ಯಾಂಕ್ ಗಳಲ್ಲಿ ವಿದ್ಯಾರ್ಥಿಗಳು ಸಾಲುಗಟ್ಟಿ ನಿಲ್ಲುವಂತ್ತಾಗಿದೆ. ಹೀಗಾಗಿ, ಆನ್ ಲೈನ್ ನಲ್ಲಿ ಹಣವನ್ನು ಪಾವತಿಸಲು ಅವಕಾಶ ಮಾಡಿಕೊಡುವಂತೆ ಪ್ರೊ.ವೆಂಕಟೇಶ್ ಕುಮಾರ್ ಮನವಿ ಮಾಡಿದರು.
ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದು ಎಂಬ ಕಾರಣದಿಂದ ಈಗಾಗಲೇ, ಆನ್ ಲೈನ್ ನಲ್ಲಿ ಹಣ ಪಾವತಿಸಲು ಸೂಚಿಸಲಾಗಿದೆ. ಬಹುತೇಕರು ಆನ್ ಲೈನ್ ನಲ್ಲಿ ಹಣ ಪಾವತಿಸುತ್ತಿದ್ದು, ಮಾಹಿತಿ ತಿಳಿಯದವರಷ್ಟೇ ಬ್ಯಾಂಕ್ ನಲ್ಲಿ ಹಣ ಪಾವತಿಸುತ್ತಿದ್ದಾರೆ ಎಂದು ಕುಲಪತಿ ಪ್ರೊ.ಹೇಮಂತ್ ಕುಮಾರ್ ಸ್ಪಷ್ಟನೆ ನೀಡಿದರು.

oooo

key words : Mysore-university-covid-center-at-campus-vc-hemanth.kumar