ಮೈಸೂರು ವಿವಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ.

ಮೈಸೂರು,ಜನವರಿ,25,2022(www.justkannada.in):  ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಭವನದಲ್ಲಿ ಮಂಗಳವಾರ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಿತು.

ಮೈವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ ಕ್ರಾಫರ್ಡ್ ಹಾಲ್‌ ನಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

“ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ’ ಎಂದು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

1950ರ ಜನವರಿ 25ರಂದು ಭಾರತದ ಚುನಾವಣಾ ಆಯೋಗ ಸ್ಥಾಪನೆಯಾಗಿದೆ. ಹೀಗಾಗಿ ಈ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. 2011 ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಎಂದು ಘೋಷಿಸಿ ಮತದಾನಕ್ಕೊಂದು ಮುನ್ನುಡಿ ಬರೆಯಲಾಗಿದೆ. ಬಳಿಕ ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ 12ನೇ ರಾಷ್ಟ್ರೀಯ ಮತದಾರರ ದಿನ.

Key words: mysore university- National Voter Day.

ENGLISH SUMMARY.

National Voters Day at University of Mysore
Mysuru, January 25, 2022 (www.justkannada.in): The University of Mysore had organized a program at the Crawford Hall on Tuesday to observe the ‘National Voters Day.’
Prof. R. Shivappa, Registrar, University of Mysore, gave the oath to all the staff members. Everybody pledged to exercise their franchise without fail.
The Election Commissioner of India was established on January 25, 1950. On January 25, 2011, the Government of India announced to observe January 25th of every year as National Voters’ Day and since then it is being followed. This year we are observing the 12th National Voters’ Day.
Keywords: National Voters’ Day/ University of Mysore/ Crawford Hall/ program