ಮೈಸೂರು ವಿವಿ : ಪಿಜಿ ಕೋರ್ಸ್ ಗಳ ಪ್ರವೇಶ ಪರೀಕ್ಷೆಗೆ ಆನ್ ಲೈನ್ ನಲ್ಲಿ ಅರ್ಜಿ ಆಹ್ವಾನ

ಮೈಸೂರು, ಅ.01,2021 : (www.justkannada.in news ) ಮೈಸೂರು ವಿಶ್ವವಿದ್ಯಾನಿಲಯದ ಅಧ್ಯಯನ ವಿಭಾಗಗಳು/ಕೇಂದ್ರಗಳು/ಘಟಕ ಕಾಲೇಜುಗಳು/ ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ಪ್ರವೇಶಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಈ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಅ. 04 ರಿಂದ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ www.uompgadmissions.com ವೀಕ್ಷಿಸುವುದು ಎಂದು ಮೈಸೂರು ವಿವಿ ಕುಲಸಚಿವ ಪ್ರೊ.ಶಿವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

key words : mysore-university-pg.enternce-exams-online-application-uom