ಮೂರು ದಿನ (ಮಾ.23) ವಿಶ್ವವಿದ್ಯಾನಿಲಯ ಕುಲಪತಿಗಳ ಸಮ್ಮೇಳನ- ಪ್ರೊ ಜಿ.ಹೇಮಂತ್ ಕುಮಾರ್.

kannada t-shirts

ಮೈಸೂರು,ಮಾರ್ಚ್,21,2022(www.justkannada.in):  ಭಾರತದ ವಿಶ್ವವಿದ್ಯಾನಿಲಯಗಳ ಸಂಘ, ನವದೆಹಲಿ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಮಾ.23ರಿಂದ 25.03,2022ರವರೆಗೆ 96ನೇ ವಾರ್ಷಿಕ ಸಭೆ ಹಾಗೂ ವಿಶ್ವವಿದ್ಯಾನಿಲಯ ಕುಲಪತಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ ಜಿ.ಹೇಮಂತ್ ಕುಮಾರ್ ತಿಳಿಸಿದರು.

ಕ್ರಾರ್ಡ್ ಹಾಲ್‌ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದ ಉದ್ಘಾಟನೆ ಮಾ.23ರಂದು ಕ್ರಾರ್ಡ್ ಭವನದಲ್ಲಿ ಬೆಳಗ್ಗೆ 9.30 ಗಂಟೆಗೆ ಆಯೋಜಿಸಲಾಗಿದೆ. ಈ ಸಮ್ಮೇಳನದಲ್ಲಿ ರಾಷ್ಟ್ರದ ವಿವಿಧೆಡೆಯಿಂದ ಸುಮಾರು 300ಕ್ಕೂ ಹೆಚ್ಚು ಕುಲಪತಿಗಳು ಭಾಗವಹಿಸುವ ನಿರೀಕ್ಷೆ ಇದೆ. ಇದರಲ್ಲಿ ಸುಮಾರು 150ಕ್ಕೂ ಹೆಚ್ಚು ಕುಲಪತಿಗಳು ವರ್ಚುಯಲ್ ಮುಖಾಂತರ ಭಾಗವಹಿಸಲಿದ್ದಾರೆ ಎಂದರು.

ಭಾರತದ ವಿಶ್ವವಿದ್ಯಾನಿಲಯಗಳ ಸಂಘವು ನೊಂದಾಯಿತ ಸಂಸ್ಥೆಯಾಗಿದ್ದು, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಶಿಕ್ಷಣವನ್ನು ಉತ್ಕೃಷ್ಟ ಮಟ್ಟಕ್ಕೆ ಕೊಂಡೊಯ್ಯುವ ಸಂಸ್ಥೆಯಾಗಿದೆ. ಈ ಸಂಘವು ಉತ್ತಮ ಗುಣಮಟ್ಟದ ಶಿಕ್ಷಣವನ್ನು, ಸಂಶೋಧನೆ, ಪರೀಕ್ಷಾ ಸುಧಾರಣೆ, ವಿದ್ವತ್ ಪೂರ್ಣ ಪ್ರಕಟಣೆಗಳನ್ನು ಮಾಡುವ ಗುರಿಯನ್ನು ಹೊಂದಿದೆ. ಒಟ್ಟಾರೆಯಾಗಿ ಈ ಸಂಸ್ಥೆಯು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹಾನ್ ಸೇವೆಯನ್ನು ಸಲ್ಲಿಸುತ್ತಿರುವ ಒಂದು ಉತ್ತಮ ಸಂಸ್ಥೆ ಎಂದು ತಿಳಿಸಿದರು.

ಭಾರತದ ವಿಶ್ವವಿದ್ಯಾನಿಲಯಗಳ ಸಂಘ, ನವದೆಹಲಿಯ 96ನೇ ವಾರ್ಷಿಕ ಸಭೆ ಹಾಗೂ ಕುಲಪತಿಗಳ ರಾಷ್ಟ್ರೀಯ ಸಮ್ಮೇಳನವನ್ನು ಮೈಸೂರು ವಿಶ್ವವಿದ್ಯಾನಿಲಯವು ಆಯೋಜಿಸುತ್ತಿದೆ. ಈ ವರ್ಷದ ಆಶಯ (ಥೀಮ್) ’ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಕ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಅರಿತುಕೊಳ್ಳುವುದು’ ಎಂಬುದಾಗಿದೆ.  ಈ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಹಾಗೂ ರಾಜ್ಯಪಾಲರಾದ ಥಾವರ್ ಚಂದರ್ ಗೆಹ್ಲೋಟ್ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಭಾರತದ ವಿಶ್ವವಿದ್ಯಾನಿಲಯಗಳ ಸಂಘದ ಅಧ್ಯಕ್ಷ  ಪ್ರೊ. ತಿರುವಾಸಗಂ, ಮಹಾ ಕಾರ್ಯದರ್ಶಿ ಡಾ. ಪಂಕಜ ಮಿತ್ತಲ್, ಮೈವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ವಿವಿ ವಿಶೇಷಾಧಿಕಾರಿ ಡಾ.ಚೇತನ್, ಪ್ರೊಘಿ.ರಾಜಶೇಖರ್ ಸೇರಿದಂತೆ ಇತರರು ಇದ್ದರು.

Key words: mysore-university-Prof.G.Hemanth kumar

website developers in mysore