Friday, September 18, 2026

BDA Apartments

ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಈ.ಸಿ.ನಿಂಗರಾಜ್ ಗೌಡ...
Home Front Page ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಈ.ಸಿ.ನಿಂಗರಾಜ್ ಗೌಡ ನೇಮಕ….

ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಈ.ಸಿ.ನಿಂಗರಾಜ್ ಗೌಡ ನೇಮಕ….

ಮೈಸೂರು,ಡಿ,11,2019(www.justkannada.in): ಕರ್ನಾಟಕ ರಾಜ್ಯ ಸರ್ಕಾರವು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನ್ನಾಗಿ ಡಾ.ಈ.ಸಿ.ನಿಂಗರಾಜ್ ಗೌಡ ಅವರನ್ನು ನೇಮಕ ಮಾಡಲಾಗಿದೆ.

ಪಾಂಡವಪುರ ತಾಲ್ಲೂಕಿನ ಈರೇಗೌಡನಕೊಪ್ಪಲು ಡಾ.ಈ.ಸಿ.ನಿಂಗರಾಜ್ ಗೌಡ ಇವರು, MLISc., M.Phil., MA., PGDHRM., PGDMCJ., DRD., Ph.D., ಶಿಕ್ಷಣವನ್ನು ಪಡೆದಿದ್ದಾರೆ. ಈ ಹಿಂದೆ ಮೈಸೂರು ವಿಶ್ವವಿದ್ಯಾನಿಲಯದ ಹಣಕಾಸು ಸಮಿತಿ ಮತ್ತು ಶಿಕ್ಷಣ ಮಂಡಳಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಪ್ರಸ್ತುತ ಮೈಸೂರಿನ ಗ್ರಂಥಪಾಲಕ ಮತ್ತು ಮಾಹಿತಿ ವಿಜ್ಞಾನಿಗಳ ಸಂಘ ( MyLISA )ದ ಅಧ್ಯಕ್ಷರಾಗಿಯೂ,  ಪೂರ್ಣವಿಕಾಸ ಸೇವಾ ಟ್ರಸ್ಟ್ ಅಧ್ಯಕ್ಷರಾಗಿಯೂ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಮಂಡ್ಯ ಕಲಾತಪಸ್ವಿ ಟ್ರಸ್ಟ್ ನ ಗೌರವ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರ ನೇಮಕಕ್ಕೆ ಕಾರಣರಾದ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ರವರಿಗೂ ಮತ್ತು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ರವರಿಗೂ, ಸಂಘ-ಪರಿವಾರದ ಮತ್ತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಎಲ್ಲಾ ಹಿರಿಯ ಕಾರ್ಯಕರ್ತರಿಗೂ ಡಾ. ಈ.ಸಿ. ನಿಂಗರಾಜ್ ಗೌಡ ಅವರು ವಂದನೆಗಳನ್ನು ಸಲ್ಲಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಬೆಳವಣಿಗೆಗೆ ತಮ್ಮ ಸಲಹೆ, ಸೂಚನೆ ಮತ್ತು ಮಾರ್ಗದರ್ಶನ ನೀಡುವವರು ದೂರವಾಣಿ ಸಂಖ್ಯೆ: 9980184789 ಸಂಪರ್ಕಿಸಬಹುದಾಗಿದೆ.

Key words: Mysore University- Syndicate member E. C. Ningaraj Gowda -appointed.