ಹೊಸ ವಿವಿ ಪ್ರಾರಂಭಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಪ್ರೊ. ಜಿ. ಹೇಮಂತ್ ಕುಮಾರ್ ನೇತೃತ್ವದ ಶಿಕ್ಷಣ ತಜ್ಞರ ಸಮಿತಿ ರಚನೆ.

kannada t-shirts

ಮೈಸೂರು,ಜೂನ್,28,2021(www.justkannada.in): ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರದಲ್ಲಿ  ಹೊಸ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಕುರಿತು ಪರಿಶೀಲಿಸಿ ವರದಿ ನೀಡಲು ಮೈಸೂರು ವಿವಿ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್  ನೇತೃತ್ವದ ಶಿಕ್ಷಣ ತಜ್ಞರ ಸಮಿತಿ ರಚನೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಪ್ರಸ್ತುತ ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕೇಂದ್ರವು ಕಾರ್ಯನಿರ್ವಹಿಸುತ್ತಿದ್ದು, ಸದರಿ ಸ್ನಾತಕೋತ್ತರ ಕೇಂದ್ರವನ್ನು ಮುಖ್ಯ ಆವರಣವನ್ನಾಗಿಸಿ ಹೊಸದಾಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ಪರಿಶೀಲಿಸುವುದು ಅವಶ್ಯವೆಂದು ಪರಿಗಣಿಸಿದ್ದು ಈ ಹಿನ್ನೆಲೆಯಲ್ಲಿ  ಶಿಕ್ಷಣ ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಚಾಮರಾಜನಗರ ಜಿಲ್ಲೆಗೆ ಅನ್ವಯಿಸುವಂತೆ ಹೊಸದಾಗಿ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಬಗ್ಗೆ ಕೂಲಕಂಷವಾಗಿ ಪರಿಶೀಲಿಸಿ ವಿವರವಾದ ವರದಿ ನೀಡಲು ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಲಾಗಿದೆ.

ತಜ್ಞರ ಸಮಿತಿಯಲ್ಲಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಜಿ. ಹೇಮಂತ್ ಕುಮಾರ್, ಅಧ್ಯಕ್ಷರಾಗಿದ್ದು, ಮೈಸೂರು ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿಗಳಾದ ಪ್ರೊ. ವಿ.ಜಿ. ತಳವಾರ್‌, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ಕೆಂಪರಾಜು ಸದಸ್ಯರಾಗಿದ್ದಾರೆ.

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ನ ಕಾರ್ಯನಿರ್ವಾಹಕ ನಿರ್ದೇಶಕರಾದ ಪ್ರೊ. ಗೋಪಾಲಕೃಷ್ಣ ಜೋಷಿ ಸಂಚಾಲಕರಾಗಿದ್ದಾರೆ.

ENGLISH SUMMARY…

UoM VC Head of the Educational Expert Committee formed to submit report on commencing new Varsity
Mysuru, June 28, 2021 (www.justkannada.in): An Educational Experts Committee has been formed led by Prof. G. Hemanth Kumar, Vice-Chancellor, University of Mysore, to submit a report on commencing a new varsity at the PG Centre in the University of Mysore.
The Post Graduate Centre of the University of Mysore is presently functioning in Chamarajanagara District. It is proposed to convert this PG Centre as the main campus and establish a new Varsity in Chamarajanagar. A committee has been formed under the UoM VC to check the possibilities and submit a report regarding this.
The committee will check and submit a report on establishing the new varsity for the Chamarajanagara District.
Prof. V.G. Talawar, former Vice-Chancellor, University of Mysore, Kemparaju, Registrar, Bengaluru North University are also part of the committee. Prof. Gopalakrishna Joshi, Executive Director, Karnataka State Higher Education Council will be the convener.
Keywords: University of Mysore/ Prof. G. Hemanth Kumar/ New Varsity/ in Chamarajanagara/ educational experts committee

Key words: mysore university-VC- G.Hemanth Kumar- new-university-chamarajanagar

website developers in mysore