ಉಪ್ಪಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಮತ್ತು ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಆಗ್ರಹ….

ಮೈಸೂರು,ಜೂ,2,2020(www.justkannada.in): ಉಪ್ಪಾರ ಸಮಾಜದ ಜನರು ಆರ್ಥಿಕವಾಗಿ ತೀರಾ ಹಿಂದುಳಿದಿದ್ದಾರೆ. ಹೀಗಾಗಿ ಉಪ್ಪಾರ ಸಮಾಜಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಎಸ್. ಯೋಗೀಶ ಉಪ್ಪಾರ ಆಗ್ರಹಿಸಿದರು.

ಉಪ್ಪಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡುವಂತೆ ಹಾಗೂ ಸಮಾಜದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಎಸ್.ಯೋಗೀಶ ಉಪ್ಪಾರ,  ಉಪ್ಪಾರ ಸಮಾಜದ ಜನರು, ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದಿದ್ದಾರೆ ಜನಾಂಗದ ಬಹುತೇಕ ಜನರು ಕಾರ್ಮಿಕರು, ದಿನಗೂಲಿ ನೌಕರರೇ ಆಗಿದ್ದಾರೆ ಆದ್ದರಿಂದ ರಾಜ್ಯ ಸರ್ಕಾರ ಉಪ್ಪಾರ ಸಮಾಜಕ್ಕೆ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು.mysore-uppara-society-demanding-political-representation-economic-package

ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಮಾಜಕ್ಕೆ ಪ್ರಾತಿನಿಧ್ಯ ನೀಡಿದ್ದರು. ಆದರೆ ಈಗಿನ ಬಿಜೆಪಿ ಸರ್ಕಾರ ಸಮಾಜಕ್ಕೆ ಯಾವುದೇ ರಾಜಕೀಯ ಪ್ರಾತಿನಿಧ್ಯ ನೀಡಿಲ್ಲ. ಆದ್ದರಿಂದ ನಿಗಮ ಮಂಡಳಿಗಳಲ್ಲಿ ಉಪ್ಪಾರ ಸಮಾಜದ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕು. ಒಂದು ವೇಳೆ ಉಪ್ಪಾರ ಸಮಾಜವನ್ನು ಕಡೆಗಣಿಸಿದರೆ ಹೋರಾಟ ಅನಿವಾರ್ಯ ಎಂದು  ರಾಜ್ಯ ಸರ್ಕಾರಕ್ಕೆ ಎಸ್. ಯೋಗೀಶ ಉಪ್ಪಾರ ಎಚ್ಚರಿಕೆ ನೀಡಿದರು.

Key words: mysore- Uppara society-Demanding- political representation -economic package