ನಮ್ಮ ಸರ್ಕಾರ ಇಲ್ಲದಿದ್ದರೂ ವರುಣಾದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ-ಪುತ್ರನ ಕೆಲಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಶಹಬ್ಬಾಶ್ ಗಿರಿ.

ಮೈಸೂರು,ಡಿಸೆಂಬರ್,9,2022(www.justkannada.in): ವರುಣಾ ಕ್ಷೇತ್ರದಲ್ಲಿ ಪುತ್ರ ಯತೀಂದ್ರ ಸಿದ್ಧರಾಮಯ್ಯ ಮಾಡಿರುವ ಅಭಿವೃದ್ಧಿ ಕೆಲಸಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಶಹಬ್ಬಶ್ ಗಿರಿ ನೀಡದ್ದಾರೆ.

ಸಿದ್ಧರಾಮನಹುಂಡಿಯಲ್ಲಿ ಮಾತನಾಡಿದ ಸಿದ್ಧರಾಮಯ್ಯ, ವರುಣಾದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾನೆ.  ನಮ್ಮ ಸರ್ಕಾರ ಇಲ್ಲದಿದ್ದರೂ ಯತೀಂದ್ರ ಸಾಕಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ ಸರ್ಕಾರ ಕೇಳಿದಷ್ಟು ಅನುದಾನ ಕೊಡದಿದ್ದರೂ ಅಭಿವೃದ್ದಿ ಕೆಲಸ ಆಗಿದೆ.  ಸಿಕ್ಕ ಅನುದಾನದಲ್ಲಿ ಪುತ್ರ ಜನಪರ ಕೆಲಸ ಮಾಡಿದ್ದಾರೆ ಎಂದರು.

ಯತೀಂದ್ರ ಬಗ್ಗೆ ಕ್ಷೇತ್ರದ ಜನರಿಗೆ ಬಹಳ  ಒಳ್ಳೆಯ ಅಭಿಪ್ರಾಯವಿದೆ ವರುಣಾ ಕ್ಷೇತ್ರದಲ್ಲಿ ಸುತ್ತಾಡಿ  ಬಹಳ ದಿನವಾಗಿತ್ತು. ಜನರ ರೆಸ್ಪಾನ್ಸ್  ಚೆನ್ನಾಗಿದೆ . ವರುಣಾದಲ್ಲಿ ಹೋದ ಕಡೆಯಲ್ಲೆಲ್ಲಾ ಇಲ್ಲೇ  ಸ್ಪರ್ಧಿಸಿ ಅಂತಾರೆ. ಆದರೇ ನಾನು ಎಲ್ಲಾ ನಿರ್ಧಾರವನ್ನ ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಸಿದ್ಧರಾಮಯ್ಯ ಹೇಳಿದರು.

ಮುಂದಿನ ಬಾರಿ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ…

ಮುಂದಿನ ಬಾರಿ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ನಾವು ಕೈಗೊಂಡು ಉಳಿದಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸುತ್ತೇವೆ ನಿಮ್ಮ ಪ್ರೀತಿ ವಿಶ್ವಾಸ ಅಭಿಮಾನ ಹೀಗೆ ಇರಲಿ ಎಂದು  ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯದ ಜನತೆಯಲ್ಲಿ ಮನವಿ ಮಾಡಿದರು.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮರಳೂರು ಗೊದ್ದನಪುರ ಗ್ರಾಮದ ಬಳಿ ನೂತನವಾಗಿ ನಿರ್ಮಿಸಿರುವ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ನೂತನ ಸೇತುವೆಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಸಿದ್ದರಾಮಯ್ಯ,  ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಹಾಗೂ ರೈತರಿಗೆ ಅನುಕೂಲವಾಗಲಿದೆ ಎಂದು ರಸ್ತೆ ಸಂಪರ್ಕಗಳನ್ನು ಹಾಗೂ ಸೇತುವೆಗಳನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಕೈಗೆತ್ತಿಕೊಂಡು ವರುಣ ವಿಧಾನಸಭಾ ಕ್ಷೇತ್ರದಲ್ಲಿಯೇ ಸುಮಾರು ಮೂರಕ್ಕೂ ಹೆಚ್ಚು ಸೇತುವೆಗಳನ್ನು ನಿರ್ಮಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗಿದೆ.  ಎಂದರಲ್ಲದೆ ನಮ್ಮ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗದವರಿಗೆ ಅತಿ ಹೆಚ್ಚು ಹೊತ್ತು ನೀಡಲಾಗಿದ್ದು ಇನ್ನು ಮುಂದೆ ಸಹ ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಹೆಚ್ಚು ಸವಲತ್ತುಗಳನ್ನು ನೀಡಿ ಅವರು ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಮುನ್ನಡೆಯಲು ಶ್ರಮಿಸುತ್ತೇವೆ ಎಂದರು.koppal-former-cm-siddaramaiah-two-chief-ministers-state-bjp-government

ಇದೇ ವೇಳೆ ಮಾತನಾಡಿದ  ಶಾಸಕ  ಯತೀಂದ್ರ ಸಿದ್ದರಾಮಯ್ಯ ಹಾಗೂ ಡಿ ತಿಮ್ಮಯ್ಯ ಅವರು,  ರಾಜ್ಯದಲ್ಲಿ ಹಿಂದುಳಿದ ಸಮಾಜಕ್ಕೆ ಹಾಗೂ ಬಡವರಿಗೆ ಕೈಗೆಟಕುವ ದರದಲ್ಲಿ ಆಹಾರ ಪದಾರ್ಥಗಳು ದೊರಕುವಂತಾದರೆ ಅವರು ಜೀವನ ನಡೆಸಲು ಅನುಕೂಲವಾಗುತ್ತದೆ ಆದರೆ ಇವತ್ತಿನ ದಿನದಲ್ಲಿ ಅಗತ್ಯ ವಸ್ತುಗಳಾದ ಅಡುಗೆ ಎಣ್ಣೆ ಎಲ್ಪಿಜಿ ಗ್ಯಾಸ್ ಪೆಟ್ರೋಲ್ ದೈನಂದಿನ ಬಳಕೆಗೆ ಬಳಸುವ ಎಲ್ಲಾ ಪದಾರ್ಥಗಳು ಗಗನಕ್ಕೇರಿರುವುದರಿಂದ ಸಾರ್ವಜನಿಕರು ಹಾಗೂ ಕಡುಬಡವರು ಜೀವನ ನಡೆಸುವುದೇ ತುಂಬಾ ಕಷ್ಟವಾಗಿದೆ ಎಂದು ವಿಶಾದ  ವ್ಯಕ್ತಪಡಿಸಿದರು.

ಮುಂಬರುವ ದಿನಗಳಲ್ಲಿ ಯಾರು ಬಡವರ ಪರವಾಗಿ ದೀನ ದಲಿತರ ಪರವಾಗಿ ರೈತರ ಪರವಾಗಿ ಬಡವರಗದ ಜನರ ಪರವಾಗಿ ನಿಲ್ಲುತ್ತಾರೆ. ಅಂತವರಿಗೆ ಬೆಂಬಲವನ್ನು ನೀಡಿ ಎಂದು ಜನತೆಯಲ್ಲಿ ಶಾಸಕರುಗಳು ಮನವಿ ಮಾಡಿದರು.  ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಚ್ . ಸಿ ಮಹದೇವಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಬಸವರಾಜು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಹಾಗು ಲೋಕೋಪಯೋಗಿ ಇಲಾಖೆ ಅಧಿಕಾರಿ ಬಸವರಾಜು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೆ ಮರಿಗೌಡ ಬಿ ಎಂ ರಾಮು ಯುವ ಕಾಂಗ್ರೆಸ್ ಮುಖಂಡ ಸುನಿಲ್ ಬೋಸ್ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.

Key words: mysore-Varuna-Former CM-Siddaramaiah