ಆ.20ರೊಳಗೆ ಮೈಸೂರು ವಿವಿ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆ ವೇಳಾ ಪಟ್ಟಿ ನಿರ್ಧಾರ

kannada t-shirts

ಮೈಸೂರು,ಆ,18,2020(www.justkannada.in): ಮೈಸೂರು ವಿವಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದು, ಆ.20ರೊಳಗೆ ವೇಳಾಪಟ್ಟಿ ಸಿದ್ಧಪಡಿಸಲಾಗುವುದು ಎಂದು ವಿವಿ ಕುಲಸಚಿವ ಆರ್.ಶಿವಪ್ಪ ತಿಳಿಸಿದ್ದಾರೆ.

ಪರೀಕ್ಷೆ ಸಂಬಂಧ ಈಗಾಗಲೇ ಆರಂಭವಾಗಿದೆ. ಸಿಂಡಿಕೇಟ್ ಸಭೆಯಲ್ಲೂ ಈ ಬಗ್ಗೆ ನಿರ್ಧಾರ ಕೈಗೊಳ್ಳ ಲಾಗಿದೆ. ಮತ್ತೊಮ್ಮೆ ಸಭೆ ನಡೆಸಿ ವೇಳಾಪಟ್ಟಿ ತೀರ್ಮಾನಿಸಲಾಗುವುದು. ಇದನ್ನು ವಿಶ್ವವಿದ್ಯಾಲಯ ವೆಬ್‌ಸೈಟ್‌ನಲ್ಲೂ ಪ್ರಕಟಿಸ ಲಾಗುವುದು. ಕೊರೊನಾ ಸೋಂಕಿನ ಸಂಬಂಧ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಪದವಿ, ಸ್ನಾತಕೋತ್ತರ ಪದವಿಯ ಅಂತಿಮ ಸೆಮಿಸ್ಟರ್‌ನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ನಲ್ಲೇ ಪರೀಕ್ಷೆ ನಡೆಸಲು ಮೈಸೂರು ವಿಶ್ವವಿದ್ಯಾಲಯ ಸಿದ್ಧತೆ ನಡೆಸಿದೆ. ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಮೈಸೂರು ವಿಶ್ವವಿದ್ಯಾಲಯ ಕಾರ್ಯಾ ಚರಿಸುತ್ತಿದ್ದು, 1.11 ಲಕ್ಷ ವಿದ್ಯಾರ್ಥಿಗಳು ಪದವಿ ವ್ಯಾಸಂಗ ಮಾಡುತ್ತಿದ್ದರೆ, 12 ಸಾವಿರದ ಆಸುಪಾಸು ಸ್ನಾತಕೋತ್ತರ ವಿದ್ಯಾರ್ಥಿಗಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪದವಿಯ ಅಂತಿಮ ಸೆಮಿಸ್ಟರ್‌ನಲ್ಲಿ 35 ಸಾವಿರ ವಿದ್ಯಾರ್ಥಿಗಳಿದ್ದು, ಈ ಎಲ್ಲರಿಗೂ ಆಯಾ ಕಾಲೇಜಿನ ವ್ಯಾಪ್ತಿಯಲ್ಲೇ ಕೋವಿಡ್ ಮುನ್ನೆಚ್ಚರಿಕೆ ಕ್ರಮ ಪಾಲಿಸಿ, ಪರೀಕ್ಷೆ ನಡೆಸಲಾಗು ವುದು. ಈಗಾಗಲೇ ಕಾಲೇಜಿನ ಪ್ರಾಂಶುಪಾಲರಿಗೆ ಈ ಸೂಚನೆಯನ್ನು ರವಾನಿಸಲಾಗಿದೆ. ಮಾನಸ ಗಂಗೋತ್ರಿ ಕ್ಯಾಂಪಸ್ ಸೇರಿದಂತೆ ಹಾಸನ, ಮಂಡ್ಯ, ಚಾಮರಾಜನಗರದ ಸ್ನಾತಕೋತ್ತರ ಕೇಂದ್ರಗಳು ಹಾಗೂ 40 ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಪದವಿ ಕೇಂದ್ರಗಳಲ್ಲಿ 6 ಸಾವಿರದಿಂದ 8 ಸಾವಿರ ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್‌ನಲ್ಲಿದ್ದಾರೆ. ಇವರಿಗೆ ಆಯಾ ಸ್ನಾತಕೋತ್ತರ ಪದವಿ ಕೇಂದ್ರಗಳಲ್ಲೇ ಪರೀಕ್ಷೆ ನಡೆಸಲು ಸಿದ್ಧತೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

website developers in mysore