ಮೈಸೂರು ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಗಾದಿಗಾಗಿ ಕಸರತ್ತು: ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಕೈ ಸದಸ್ಯರ ಸಭೆ

Promotion

ಮೈಸೂರು, ಮಾರ್ಚ್ 7, 2020 (www.juskannada.in): ಮೈಸೂರು ಜಿಲ್ಲಾ ಪಂಚಾಯಿತಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರನ್ನ ನೇಮಕ ಮಾಜಿ ಸಚಿವ ಹೆಚ್ ಸಿ ಮಹಾದೇವಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆದಿದೆ.

ನಗರದ ಜಲದರ್ಶಿನಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಇಂದು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಹಿನ್ನಲೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ.

ಎಲ್ಲಾ ಜಿ.ಪಂ ಸದಸ್ಯರು ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ಸಭೆಯಲ್ಲಿ ಭಾಗಿದ್ದಾರೆ. ಹೀಗಾಗಲೇ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಚ ಸ್ಥಾನಕ್ಕೆ ಕೃಷ್ಣ ಬೇಡಿಕೆ ಇಟ್ಟಿದ್ದಾರೆ.

ಕೃಷ್ಣ ಜೊತೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಿಗ್ ಪೈಟ್ ನಡೆಸುತ್ತಿರುವ ಮಹಾದೇವಪ್ಪ ಆಪ್ತ ಮಂಜುನಾಥ್. ಕೆಲವೇ ಹೊತ್ತಿನಲ್ಲಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಯಾರಿಗೆ ಎಂಬುದು ಕ್ಲೀಯರ್ ಆಗಲಿದೆ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತಲಕಾಡು ಜಿ.ಪಂ ಕ್ಷೇತ್ರದ ಮಂಜುನಾಥ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.