ಬೈಕ್ ಮತ್ತು ಕಬ್ಬಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿ…..

Promotion

ಮೈಸೂರು,ಮಾ,3,2020(www.justkannada.in):  ಬೈಕ್ ಮತ್ತು ಕಬ್ಬಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಸೋಸಲೆ ಬಳಿ ಈ ಘಟನೆ ನಡೆದಿದೆ.  ಅಪಘಾತದಲ್ಲಿ  ಬೈಕ್ ಸವಾರ ಗೌತಮ್ (30) ಹಾಗೂ ಹಿಂಬದಿ ಸವಾರ ಹಿರೇಗೌಡರಿಗೆ ಗಂಭೀರ ಗಾಯಗಳಾಗಿದೆ. ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಗೌತಮ್ ಮಂಡ್ಯ ಜಿಲ್ಲೆಯ ಕುಮ್ಮಡಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಇಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಬ್ಬಿನ ಲಾರಿ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಈ ಕುರಿತು ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-collision- between – bike – cane truck.