ಸರ್ಕಾರದ ನಡೆ ಖಂಡಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಡೋಜ ಡಾ. ಹಂಪ ನಾಗರಾಜಯ್ಯ.

ಬೆಂಗಳೂರು,ಮೇ,30,2022(www.justkannada.in): ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಚರ್ಚೆ ತಾರಕಕ್ಕೇರಿದ್ದು ಈ ನಡುವೆ ರೋಹಿತ್ ಚಕ್ರತೀರ್ಥ ವಿರುದ್ದ ಕ್ರಮ ಕೈಗೊಳ್ಳದ ಸರ್ಕಾರದ ನಡೆಯನ್ನು ಖಂಡಿಸಿ ಸಾಹಿತಿ ನಾಡೋಜ ಹಂಪನಾಗರಾಜಯ್ಯ ಅವರು ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ  ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಾಡೋಜ ಹಂಪನಾಗರಾಜಯ್ಯ ಪತ್ರ ಬರೆದು ರಾಜೀನಾಮೆ ಸಲ್ಲಿಸಿದ್ದಾರೆ. ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು.  ಪತ್ರದಲ್ಲಿ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

ಆದರೆ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿ ಕುವೆಂಪು ಪತ್ರಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ. ರಾಷ್ಟ್ರಕವಿ ಕುವೆಂಪುರವನ್ನೂ ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರೀಸಬೇಕೆಂದು ಹಂಪನಾ ಮನವಿ ಮಾಡಿದ್ದಾರೆ.

Key words: Nadoja- Hampa Nagarajayya – resigned –Kuvempu- Foundation- chairman,