ಮೇಲ್ಮನೆ ಚುನಾವಣೆಯಲ್ಲಿ ಬೆಂಬಲಿಸಿದ್ರೆ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸಿಹಿ ಸುದ್ದಿ ಎಂದ ನಳಿನ್ ಕುಮಾರ್ ಕಟೀಲ್

Promotion

ಬೆಂಗಳೂರು, ಅಕ್ಟೋಬರ್ 21, 2021 (www.justkannada.in): ರಾಜ್ಯದ ಗ್ರಾಮಪಂಚಾಯಿತಿ ಸದಸ್ಯರಿಗೆ ಗುಡ್ ನ್ಯೂಸ್ ನೀಡುವ ಭರವಸೆ ನೀಡಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್.

ಕಲಬುರಗಿಯಲ್ಲಿ ನಡೆದ ಜನ ಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನವನ್ನು 10 ಸಾವಿರಕ್ಕೆ ಹೆಚ್ಚಿಸಲಾಗುವುದು. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಈ ಬಾರಿ ಹೆಚ್ಚು ಸಂಖ್ಯೆಯ ಪರಿಷತ್ ಸದಸ್ಯರನ್ನು ಗೆಲ್ಲಿಸಿದರೆ, ಮುಂದೆ ಗ್ರಾಪಂ ವರಿಷ್ಠರು ಹಾಗೂ ಸದಸ್ಯರ ಗೌರವ ಧನ ಏರಿಸಲು ಪಕ್ಷದಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಕೇರಳದಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ ತಲಾ 1 ಕೋಟಿ ರೂ. ಅನುದಾನ ನೀಡಲಾಗುತ್ತದೆ. ಗ್ರಾಪಂ ಅಧ್ಯಕ್ಷರಿಗೆ ಕಾರು, ಆಪ್ತ ಸಹಾಯಕರನ್ನು ಒದಗಿಸಲಾಗುತ್ತದೆ. ಇಲ್ಲಿಯೂ ಗ್ರಾಮ ಪಂಚಾಯಿತಿಗಳಿಗೆ ನೇರವಾಗಿ ಹಣ ನೀಡಲು ಸಿಎಂ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.