ಕೇರಳ ಗಡಿ ಕೆಲ ಗ್ರಾಮಗಳ ಹೆಸರು ಬದಲಾವಣೆ ವಿಚಾರ: ಕನ್ನಡಪರ ನಿಲುವು ಪ್ರಕಟಿಸಿರುವ ಶಾಸಕ ಅಶ್ರಫ್ ಗೆ ಅಭಿನಂದನೆ- ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಜೂನ್,29,2021(www.justkannada.in):  ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ ಅಶ್ರಫ್ ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಹೀಗಾಗಿ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

ಹಾಗೆಯೇ ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ  ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ ಎಂದು ಹೆಚ್.ಡಿಕೆ ಸಲಹೆ ನೀಡಿದ್ದಾರೆ.

ಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದಿದ್ದಾರೆ.

ENGLISH SUMMARY….

Row over changing of Kannada names in Kerala border: Former CM HDK appreciates MLA Ashraf’s pro-Kannada stand
Bengaluru, June 29, 2021 (www.justkannada.in): Former Chief Minister H.D. Kumaraswamy has appreciated Manjewshwara MLA Ashraf’s statement that he would lead the fight if Kannada is insulted in Kasargod.
In his tweet, the former CM mentioned, “The Manjeshwara MLA Ashraf has informed that in case if the Kannada language is insulted in Kasargod he would organize a protest and also would lead it. Ashraf had earlier taken oath in Kannada. Now his statement has brought a lot of relief. Hence, I appreciate him,” his tweet read.
Keywords: Former CM HDK/ Manjeshwar/ MLA Ashraf/ appreciates Pro-Kannada stand

Key words: Name -change – some villages – Kerala- border-MLA-Ashraf-Kannada-H.D. Kumaraswamy.