ನಮ್ಮ ಮೆಟ್ರೋ ಕಾಮಗಾರಿ ವೇಳೆ ತಪ್ಪಿದ ಭಾರಿ ದುರಂತ.

kannada t-shirts

ಬೆಂಗಳೂರು,ಅಕ್ಟೋಬರ್,24,2021(www.justkannada.in):  ನಮ್ಮ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ಅವಾಂತರ ಸಂಭವಿಸಿದ್ದು,  ಭಾರಿ ದುರಂತವೊಂದು ತಪ್ಪಿದೆ.

ನಮ್ಮ ಮೆಟ್ರೋ ಫೇಸ್-2 ಕಾಮಗಾರಿ ವೇಳೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಬಹುದೊಡ್ಡ ಮಷೀನ್ ಸುಮಾರು 40 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಬೆಂಗಳೂರಿನ ಸಿಲ್ಕ್ ಬೋರ್ಡ್ ಬಳಿ ಜೋಡಣೆ ವೇಳೆ ಈ ಘಟನೆ ಸಂಭವಿಸಿದ್ದು, ಮೆಟ್ರೋ ಸೆಗ್ಮೆಂಟ್ಸ್ ಜೋಡಿಸುವ ಮಷೀನ್ ಅರ್ಧಕ್ಕೆ ಕಟ್ ಆಗಿದೆ.

ಬೆಳಗ್ಗೆ 6.30ರ ಸುಮಾರಿಗೆ ಈ ಅವಘಡ ನಡೆದಿದೆ ಎನ್ನಲಾಗಿದೆ. ಸದ್ಯ ಕರ್ತವ್ಯನಿರತ ನೂರಾರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಲ್ಕ್ ಬೋರ್ಡ್-ಕೆ.ಆರ್.ಪುರಂ ಮಾರ್ಗವಾಗಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ವೇಳೆ ಅಸಂಬಲ್ ಜೋಡಿಸುವಾಗ ಲಾಂಚಿಂಗ್ ಗಾರ್ಡ್ ಎಂಬ ಬೃಹತ್ ಮಷೀನ್ ದಿಢೀರ್ ಕುಸಿದು ಕೆಳಗೆಬಿದ್ದಿದೆ. ಮಷೀನ್ ಅರ್ಧಕ್ಕೆ ಕಟ್ ಆಗಿದೆ. ಸದ್ಯ ಅವಘಡದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ.

Key words: namma –metro-works-bangalore- machine- fell – about -40 feet high

website developers in mysore