ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ.

Promotion

ಬೆಂಗಳೂರು,ಫೆಬ್ರವರಿ,6,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗ್ಗಾಗೆ ಭೇಟಿ ನೀಡುತ್ತಿದ್ದು ಇಂದು ಸಹ ಆಗಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರದ ಎರಡು ಮಹತ್ವದ ಇಲಾಖೆಗಳ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ಮತ್ತು ತುಮಕೂರಿಗೆ ಭೇಟಿ ಕೊಡುತ್ತಿದ್ದಾರೆ.  ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬಿದರೆಹಳ್ಳ ಕಾವಲ್‌ ಬಳಿ ನಿರ್ಮಾಣಗೊಂಡಿರುವ ಹೆಚ್‌ಎಎಲ್ ಹೆಲಿಕಾಪ್ಟರ್ ಘಟಕ ಇಂದು ಲೋಕಾರ್ಪಣೆಗೊಳ್ಳುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿದ್ದಾರೆ.

ಹೆಚ್‌ಎಎಲ್ ಲೋಕಾರ್ಪಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತುಮಕೂರು ಜಿಲ್ಲೆಗೆ ಆಗಮಿಸುತ್ತಿದ್ದು, ಅವರ ಸ್ವಾಗತಕ್ಕೆ ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಜ್ಜಾಗಿದ್ದಾರೆ. ಮಧ್ಯಾಹ್ನ 3.30  ವೇಳೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದು ಹೆಚ್‌ಎಎಲ್ ಘಟಕವನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬಿಗಿಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Key words: Narendra Modi – MP-Modi- state -today.