ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ನವದೀಪ್ ಸೈನಿ, ಮಯಾಂಕ್ ಅಗರ್ವಾಲ್ ಆಯ್ಕೆ

Promotion

ಬೆಂಗಳೂರು, ಫೆಬ್ರವರಿ 04, 2020 (www.justkannada.in): ನ್ಯೂಜಿಲೆಂಡ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.

ಗಾಯದಿಂದ ದೀರ್ಘಾವಧಿ ಹೊರಗುಳಿದಿದ್ದ ಪೃಥ್ವಿ ಶಾ ತಂಡಕ್ಕೆ ಮರಳಿದ್ದು, ಯುವ ವೇಗಿ ನವದೀಪ್ ಸೈನಿ ಚೊಚ್ಚಲ ಅವಕಾಶ ಪಡೆದುಕೊಂಡಿದ್ದಾರೆ. ದೆಹಲಿ ಪರ ರಣಜಿ ಟ್ರೋಫಿ ವೇಳೆ ಪಾದದ ಗಾಯಕ್ಕೆ ತುತ್ತಾಗಿದ್ದ ಹಿರಿಯ ವೇಗಿ ಇಶಾಂತ್‌ ಶರ್ಮಾ ಅವರನ್ನೂ ಟೆಸ್ಟ್ ತಂಡಕ್ಕೆ ಆಯ್ಕೆಮಾಡಲಾಗಿದೆ.

ಅವರು ಫಿಟ್ನೆಸ್‌ ಟೆಸ್ಟ್ ಪಾಸ್ ಮಾಡುವ ಅಗತ್ಯವಿದೆ. ಅಲ್ಲದೆ, ಗಾಯದಿಂದ ಮುಂಬರುವ ಏಕದಿನ ಹಾಗೂ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿದ್ದಾರೆ. ಏಕದಿನ ಸರಣಿಗೆ ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾಗಿದ್ದಾರೆ.