ನವೀನ್ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಿಎಂ ಬಸವರಾಜ ಬೊಮ್ಮಾಯಿ.

Promotion

ಹಾವೇರಿ,ಮಾರ್ಚ್,21,2022(www.justkannada.in): ಉಕ್ರೇನ್ ನಲ್ಲಿ ರಷ್ಯಾದಾಳಿಗೆ ಮೃತಪಟ್ಟು 20 ದಿನಗಳ ಬಳಿಕ ಸ್ವಗ್ರಾಮ ಹಾವೇರಿ ಜಿಲ್ಲೆ ಚಳಗೇರಿ ಗ್ರಾಮಕ್ಕೆ ವಿದ್ಯಾರ್ಥಿ ನವೀನ್ ಮೃತದೇಹ ತರಲಾಗಿದ್ದು ಈ ನಡುವೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅಂತಿಮ ದರ್ಶನ ಪಡೆದರು.

ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಮೃತ ನವೀನ್ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಬಳಿಕ ನವೀನ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ಶಾಸಕ ಅರುಣ್ ಕುಮಾರ್ ಸಂಸದ ಶಿವಕುಮಾರ್ ಉದಾಸಿ ಸೇರಿ ಹಲವು ಗಣ್ಯಾತಿಗಣ್ಯರು ಅಂತಿಮ ನಮನ ಸಲ್ಲಿಸಿದರು.

Key words: navenn-deadbody-CM-Basavaraj bommai