ಐಸಿಸಿ ವಿಶ್ವಕಪ್’ಗೂ ನಾಕೌಟ್‌ ಪಂದ್ಯಗಳು ಬೇಕು: ವಿರಾಟ್ ಕೊಯ್ಲಿ

Promotion

ಲಂಡನ್, ಜುಲೈ 12, 2019 (www.justkannada.in): ಐಸಿಸಿ ವಿಶ್ವಕಪ್ ಟೂರ್ನಿಯಲ್ಲೂ ಐಪಿಎಲ್ ಮಾದರಿಯ ನಾಕೌಟ್‌ ಪಂದ್ಯಗಳನ್ನು ಆಯೋಜಿಸಬೇಕು ಎಂದು ಭಾರತದ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಗಳಿಸಿದ್ದ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಒಂದೇ ಒಂದು ಪಂದ್ಯದಲ್ಲಿ ಸೋತು ಟೂರ್ನಿಯಿಂದ ಹೊರಬಿತ್ತು.

ಇದರ ಬೆನ್ನಲ್ಲೇ ಅಭಿಮಾನಿಗಳು ಐಪಿಎಲ್ ಮಾದರಿಯ ನಾಕೌಟ್ ಹಂತವನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಇಂತಹುದೇ ವಾದವನ್ನು ಮಂಡಿಸಿದ್ದಾರೆ.