ನೀಟ್ ವಿಳಂಬ : ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್- ಸಚಿವ ಡಾ.ಅಶ್ವತ್ ನಾರಾಯಣ್

ರಾಮನಗರ,ಫೆಬ್ರವರಿ,11,2022(www.justkannada.in):  ನೀಟ್ ಪರೀಕ್ಷೆಯಲ್ಲಿ ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ. ಹಾಗೆಯೇ ಈ ವರ್ಷ ವಿದ್ಯಾರ್ಥಿಗಳಿಂದ ಸಂಗ್ರಹ ಮಾಡಿದ್ದ ಶುಲ್ಕವನ್ನೂ ಹಿಂದಿರುಗಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ ನಾರಾಯಣ್ ತಿಳಿಸಿದ್ದಾರೆ.

ಸುದ್ದಿ ಮಾಧ್ಯಮಗಳಲ್ಲಿ ಈ ಬಗ್ಗೆ ಬಂದಿರುವ ವರದಿಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ ಸಚಿವ ಅಶ್ವಥ್ ನಾರಾಯಣ್,  ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ‌ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದರು.

‘ಸಾಮಾನ್ಯವಾಗಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೆ ನಡೆಯುತ್ತಿತ್ತು. ಆದರೆ ಈ ವರ್ಷ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿದೆ. ಹೀಗಾಗಿ, ಅನಿಶ್ಚಿತ ಪರಿಸ್ಥಿತಿ ತಲೆದೋರಿದೆ. ಇದರಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ, ಆಸಕ್ತರು ಅಲ್ಲಿಗೆ ಹೋಗಬಹುದು. ಅದಕ್ಕೆ ಯಾವುದೇ ದಂಡ ವಸೂಲಿ ಮಾಡುವುದಿಲ್ಲ. ಹಾಗೆಯೇ ಈ ವರ್ಷ ಕಟ್ಟಿದ್ದ ಶುಲ್ಕವನ್ನೂ ಮುಟ್ಟುಗೋಲು ಹಾಕಿಕೊಳ್ಳುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳಿಗೆ ಹಿಂದಿರುಗಿಸಲಾಗುವುದು ಎಂದರು.

ಪ್ರವೇಶ ಪಡೆದ ನಂತರ ಸೀಟು ಬಿಟ್ಟು ಹೋಗುವವರಿಗೆ ಶುಲ್ಕದ ಐದು ಪಟ್ಟು ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ. ಆದರೆ ಈ ಬಾರಿ ಇದಕ್ಕೆ ವಿನಾಯಿತಿ ನೀಡಲಾಗಿದೆ ಎಂದರು.

Key words: Neet-Fees – students-Minister -Dr. Ashwath Narayan

ENGLISH SUMMARY….

NEET delay: Fee to be returned to the students who have quit the course – Minister Dr. Ashwathnarayana
Ramanagara, February 11, 2022 (www.justkannada.in): The fine amount imposed on the students who have availed admission for medical courses who have already availed an engineering seat due to the delay in NEET exams has been canceled. Also, instructions have been given to the Karnataka Examinations Authority to return the fee amount which has been collected from the students this year, according to Higher Education Minister Dr. C.N. Ashwathanarayana.
Responding to the newspaper reports regarding this, the Minister also clarified that however, this concession is applicable only for this year.
Usually, both the engineering and medical seat allocation process was being held simultaneously. But as the NEET examination issue is in the court, the medical seat allocation process is also delayed, causing uncertainty for the students. As a result of this, students who have already got admitted to engineering courses can migrate to medical courses if they get a medical seat now. No fine will be collected from them. Also, the yearly fee that they have paid will also be returned.
According to law, there is a provision to impose five times fine on the actual fee for students who leave a course after getting admission.
Keywords: Engineering/ Medical course/ fee/ Higher Education Minister Dr. C.N. Ashwathanarayana