ರಾಷ್ಟ್ರೀಯ ಶಿಕ್ಷಣ ನೀತಿ ಹಿಂದೆ ವಿದ್ಯಾರ್ಥಿ ಹಿತ ಮಾತ್ರ: ಇದೇ 23ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ-ಸಚಿವ ಅಶ್ವಥ್ ನಾರಾಯಣ್.

Promotion

ಬೆಂಗಳೂರು,ಆಗಸ್ಟ್,18,2021(www.justkannada.in):  ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಹಿಂದೆ ವಿದ್ಯಾರ್ಥಿ ಹಿತಬಿಟ್ಟು ಯಾವುದೇ ದುರುದ್ದೇಶ ಅಥವಾ ಹಿಡೆನ್ ಅಜೆಂಡಾ ಇಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಇದೇ ತಿಂಗಳ 23ರಿಂದ ಹೊಸ ಶಿಕ್ಷಣ ನೀತಿಯಡಿ ಕಲಿಕೆಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದೆಂದು ಪ್ರಕಟಿಸಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಕ್ರಿಸ್ತು ಜಯಂತಿ ಕಾಲೇಜು ಸಹಯೋಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನ ಕುರಿತು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ  ಸಚಿವ ಅಶ್ವಥ್ ನಾರಾಯಣ್, ಪ್ರವೇಶ ಪ್ರಕ್ರಿಯೆಗೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡುವರು ಎಂದರು.

ವಿರೋಧ ಸರಿಯಲ್ಲ:

ಶಿಕ್ಷಣ ನೀತಿಯನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡದೇ ಅಥವಾ ಅದನ್ನು ಸರಿಯಾಗಿ ಗ್ರಹಿಸದೇ ಟೀಕೆ ಮಾಡುವುದು ಸರಿಯಲ್ಲ. ಶಿಕ್ಷಣ ನೀತಿಯನ್ನು ವಿರೋಧ ಮಾಡುವುದೂ ದೇಶದ ಅಭಿವೃದ್ಧಿಯನ್ನು ವಿರೋಧಿಸುವುದು ಎರಡೂ ಒಂದೇ ಎಂದು ಸಚಿವ ಅಶ್ವಥ್ ನಾರಾಯಣ್ ಅಭಿಪ್ರಾಯಪಟ್ಟರು.

ವಿಶಾಲ ತಳಹದಿ ಹಾಗೂ ವಿಶಾಲ ದೃಷ್ಟಿಕೋನದಿಂದ ರೂಪಿತವಾಗಿರುವ ಶಿಕ್ಷಣ ನೀತಿಯಲ್ಲಿ ಬಹು ಆಯ್ಕೆಯ ಕಲಿಕೆಗೆ ವಿಪುಲ ಅವಕಾಶವಿದೆ. ಇಷ್ಟು ದಿನ ನಾವು ಹೇಳಿದ್ದನ್ನು ವಿದ್ಯಾರ್ಥಿಗಳು ಕಲಿಯುತ್ತಿದ್ದರು. ಮಕ್ಕಳ ಪರಿಪೂರ್ಣ ವಿಕಾಸಕ್ಕೆ ಅವಕಾಶ ಇರಲಿಲ್ಲ. ಇನ್ನು ಮುಂದೆ ಅವರ ಇಚ್ಛೆಯ ವಿಷಯವನ್ನು ಕಲಿಯಲಿದ್ದಾರೆಂದ ಅವರು; ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಇತರೆ ಯಾವುದೇ ಕ್ಷೇತ್ರವೇ ಇರಲಿ ದೇಶ ಎದುರಿಸುತ್ತಿರುವ ಪ್ರತಿಯೊಂದು ಸವಾಲಿಗೂ ಶಿಕ್ಷಣ ನೀತಿಯಲ್ಲಿ ಉತ್ತರವಿದೆ ಎಂದರು.

ಯಾವುದೇ ದೇಶ, ಯಾವುದೇ ಹಂತದಲ್ಲಿ ಹಾಗೂ ಯಾವುದೇ ಸಮಸ್ಯೆಯನ್ನು ಎದುರಿಸುತ್ತಿದ್ದರೂ ಅದನ್ನು ನಿರಾಯಾಸವಾಗಿ ಬಗೆಹರಿಸುವ ಶಕ್ತಿ ಶಿಕ್ಷಣಕ್ಕೆ ಮಾತ್ರವೇ ಇದೆ ಎಂಬುದು ನನ್ನ ಅಚಲ ನಂಬಿಕೆ. ಶಿಕ್ಷಣ ಇಲ್ಲದೆ ಅಭಿವೃದ್ಧಿ ಎನ್ನುವುದು ಮರೀಚಿಕೆ. ಆಮೂಲಾಗ್ರ ಮತ್ತು ರಚನಾತ್ಮಕ ಪ್ರಗತಿ ಸಾಧಿಸಬೇಕಿದ್ದರೆ ಶಿಕ್ಷಣಕ್ಕೆ ಒತ್ತು ನೀಡಲೇಬೇಕು. ಈ ನಿಟ್ಟಿನಲ್ಲಿ ಜರ್ಮನಿ, ದಕ್ಷಿಣ ಕೊರಿಯಾ, ಜಪಾನ್ ನಂಥ ಚಿಕ್ಕ ಚಿಕ್ಕ ದೇಶಗಳು ಅದ್ಭುತಗಳನ್ನೇ ಸೃಷ್ಟಿ ಮಾಡಿವೆ ಎಂದರು ಸಚಿವರು.

ಶಿಕ್ಷಣ ಸಂಸ್ಥೆಗಳನ್ನು ಅತ್ಯುತ್ತಮವಾಗಿ ರೂಪಿಸಬೇಕು. ವಿದ್ಯಾರ್ಥಿ ಕೇಂದ್ರಿತ ವ್ಯವಸ್ಥೆ ಅಲ್ಲಿರಬೇಕು. ಮುಂದಿನ ಅನೇಕ ವರ್ಷಗಳ ಮುನ್ನೋಟ ಇಟ್ಟುಕೊಂಡು ಸಂಸ್ಥೆಗಳನ್ನು ಕಟ್ಟಿ ಬೆಳೆಸಬೇಕು. ಅದಕ್ಕಾಗಿ ಸಮಾಜದ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇಂಥ ಸಂಸ್ಥೆಗಳನ್ನು ಆಮೂಲಾಗ್ರವಾಗಿ ಬೆಳೆಸಲು ನೆರವಾಗಬೇಕು. ಯಾವುದೇ ಶಿಕ್ಷಣ ಸಂಸ್ಥೆಯೂ ಲಾಭ ಗಳಿಕೆಗಾಗಿ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಡಾ.ಅಶ್ವತ್ಥನಾರಾಯಣ ನುಡಿದರು.

ನಮ್ಮ ದೇಶದ ಜನಸಂಖ್ಯೆ ಈಗ 130 ಕೋಟಿ ಮೀರುತ್ತಿದೆ. ಅದೇ ಪ್ರಮಾಣದಲ್ಲಿ ಸವಾಲುಗಳು, ಅಗತ್ಯಗಳು ಹೆಚ್ಚುತ್ತಿವೆ. ಇವೆಲ್ಲವನ್ನೂ ಎದುರಿಸಿ ಗೆಲ್ಲಬೇಕಾದರೆ ನಮಗೆ ಎದುರಿಗಿರುವ ಏಕೈಕ ಸಾಧನವೆಂದರೆ ಶಿಕ್ಷಣ ಮಾತ್ರ ಎಂದು ಸಚಿವರು ಪ್ರತಿಪಾದಿಸಿದರಲ್ಲದೆ, ಶಿಕ್ಷಣ ನೀತಿ ಜಾರಿ ದಿಕ್ಕಿನಲ್ಲಿ ಇಂಥ ಅತ್ಯುತ್ತಮ ವಿಚಾರ ಸಂಕಿರಣವನ್ನು ಮೊತ್ತ ಮೊದಲು ಆಯೋಜಿಸಿದ ಬೆಂಗಳೂರು ಉತ್ತರ ವಿವಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರಿಸ್ತು ಜಯಂತಿ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಡಾ.ಅಗಸ್ಟೀನ್ ಜಾರ್ಜ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ.ಡಿ.ಕುಮುದಾ, ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಮಾತನಾಡಿದರು.

ಬೆಂಗಳೂರು ಉತ್ತರ ವಿವಿ ರಿಜಿಸ್ಟ್ರಾರ್ ಡಾ.ವಿ.ವೆಂಕಟೇಶ ಮೂರ್ತಿ, ಕ್ರಿಸ್ತು ಜಯಂತಿ ಕಾಲೇಜಿನ ಡೀನ್ ಡಾ.ಜೆ.ಅಲೋಶಿಯಸ್ ಎಡ್ವರ್ಡ್ ಮುಂತಾದವರು ವಿಚಾರ ಸಂಕಿರಣದಲ್ಲಿ ಭಾಗಿಯಾಗಿದ್ದರು.

ENGLISH SUMMARY….

National seminar on “Implementation of NEP 2020- A Road Map”
NEP will be implemented systematically: Dr.C.N.Ashwatha Narayana

Bengaluru: The government will focus on systematic implementation of National Education Policy-2020 (NEP-2020), Dr.C.N.Ashwatha Narayana, the minister of Higher Education, stated on Wednesday.

On inaugurating the national seminar, “Implementation of NEP 2020- A Road Map” organized by Kristu Jayanti College (Autonomous) in association with Bengaluru North University, he said, the real empowerment of the society can only happen based on the appropriate education system for which the NEP aspires.

The National Education Policy-2020 has the objective of providing the right kind of education, aims to develop well-rounded future citizens, and upholding the rich heritage of the country. The economy could thrive only through knowledge, innovation, scientific and technical progress, he explained.

Narayana pointed out, “The government will focus on systematic implementation of NEP and seeks CSR funds from industry and donations from organizations towards this. The NEP strengthens the education system by eliminating the previously existed rigidities, granting autonomy to institutions and becoming more flexible.”

P.Pradeep, The Commissioner, Dept. of collegiate education, told, the real essence of the NEP-2020 lies in awarding freedom to students and there will be no hard separation between arts, humanities, science subjects. In this way, the policy enables multi-disciplinary learning.

Saying, that, NEP aspires to empower students by enhancing their skills & ability and giving importance to Health & Wellness, he added, The National Skills Qualifications Framework (NSQF) aligned Curriculum, Scientific pedagogy, qualitative assessment, and adaptability of the system will pave way for preparing students to become globally competitive.

Prof. B.Thimmegowda, Vice-Chairman, State Higher Education Council, Prof. Kumuda, Vice-Chancellor (in charge), Bengaluru North University, Dr.Venkatesha Murty, Registrar, Bengaluru North University, and Fr.Dr.Augustine George CMI, Principal, Kristu Jayanti College were present.

Key words: NEP – implemented –systematically-minister- Dr.C.N.Ashwatha Narayana