ಹೊಸ ಡಿಸಿಎಂ ಸ್ಥಾನ ಸೃಷ್ಠಿ ಇಲ್ಲ ಎಂಬ ಸಿಎಂ ಬಿಎಸ್ ವೈ ಹೇಳಿಕೆ ವಿಚಾರ : ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು ಹೀಗೆ….

Promotion

ಕಲ್ಬುರ್ಗಿ,ಜ,30,2020(www.justkannada.in):  ರಾಜ್ಯದಲ್ಲಿ ಹೊಸ ಡಿಸಿಎಂ ಹುದ್ದೆ ಸೃಷ್ಠಿ ಇಲ್ಲ ಎಂದು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿರುವ  ಆರೋಗ್ಯ ಸಚಿವ ಶ್ರೀರಾಮಲು ಮತ್ತೊಂದು ಡಿಸಿಎಂ ಸ್ಥಾನದ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಇಂದು ಮಾತನಾಡಿದ ಸಚಿವ ಶ್ರೀರಾಮುಲು,  ಸಚಿವ ಸಂಪುಟ ವಿಸ್ತರಣೆ ವೇಳೆ ವಾಲ್ಮಿಕಿ ಸಮುದಾಯಕ್ಕೆ ಡಿಸಿಎಂ ಹುದ್ದೆ ನೀಡಬೇಕು ಎಂದು ವಾಲ್ಮಿಕಿ ಪೀಠದ ಸ್ವಾಮೀಜಿಗಳು ಬೇಡಿಕೆ ಇಟ್ಟಿದ್ದಾರೆ. ಆದರೆ ರಾಜಕೀಯ ನಾಯಕನಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಯಾರಿಗೆ ಏನು ಮಾಡಬೇಕು ಎಂದು ಪಕ್ಷಕ್ಕೆ ಗೊತ್ತಿದೆ ಎಂದು ತಿಳಿಸಿದರು.

ಈ ಕುರಿತು ಚರ್ಚಿಸಲು ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ನಾಳೆ ಅಥವಾ ಫೆಬ್ರವರಿ ಮೊದಲ ವಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಹೊಸ ಡಿಸಿಎಂ ಸ್ಥಾನ ಸೃಷ್ಟಿಸುವುದು ಪಕ್ಷದ ಹೈಕಮಾಂಡ್ ಗೆ ಬಿಟ್ಟಿದ್ದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ಶ್ರೀರಾಮುಲು ತಿಳಿಸಿದರು.

Key words: new -DCM- position – Minister Sriramulu -reaction