ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ: ಎಸ್.ಆರ್ ವಿಶ್ವನಾಥ್ ಸಂಕಲ್ಪ….

ಬೆಂಗಳೂರು, ನವೆಂಬರ್ 26,2020(www.justkannada.in):   ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.I didn't knew CM BSY will think so cheaply - KPCC President D.K. Shivakumar

ಗುರುವಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ  ಎಸ್.ಆರ್ ವಿಶ್ವನಾಥ್, ಕೆಲವು ಭ್ರಷ್ಟ ಅಧಿಕಾರಿಗಳಿಂದ ಸಂಸ್ಥೆಗೆ ಕಪ್ಪು ಚುಕ್ಕೆ ಬಂದಿದೆ. ಇದನ್ನು ತೊಡೆದು ಹಾಕುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ಜನಸ್ನೇಹಿಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗದೇ ಏನಾದರೂ ಸಮಸ್ಯೆಗಳಿದ್ದರೆ ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು. ಈಗಾಗಲೇ ಹಣ ನೀಡಿರುವ ಸಾರ್ವಜನಿಕರಿಗೆ ಅರ್ಕಾವತಿ ಮತ್ತು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಎಸ್.ಆರ್ ವಿಶ್ವನಾಥ್ ತಿಳಿಸಿದರು.

ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ದಿಸೆಯಲ್ಲಿ ರೈತರ ಮನವೊಲಿಸಿ ಭೂಸ್ವಾಧೀನ ಮಾಡಿಕೊಳ್ಳಲಾಗುವುದು ಎಂದರು.

ನಗರದ ಸಂಚಾರ ದಟ್ಟಣೆ ನಿವಾರಣೆ ಮಾಡುವ ದೃಷ್ಟಿಯಿಂದ ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫರೆಲ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಬಿಡಿಎ ಬದ್ಧವಾಗಿದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಇನ್ನು ಬಿಡಿಎನಲ್ಲಿ ಜನ ವಿರೋಧಿ ಸಿಬ್ಬಂದಿಯನ್ನು ಸಹಿಸುವುದಿಲ್ಲ. ಮುಂದಿನ ಒಂದು ವರ್ಷದೊಳಗೆ ಸಂಸ್ಥೆಯನ್ನು ಆರ್ಥಿಕವಾಗಿ ಸಬಲವನ್ನಾಗಿ ಮಾಡಲಿದ್ದೇವೆ ಎಂದು ಎಸ್.ಆರ್ ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದರು.

Key words: New-development – Bangalore Development Authority-BDA chairman-  SR Vishwanath