ನಾಳೆ ಬೆಳಿಗ್ಗೆ ನೂತನ ಸಚಿವರಿಗೆ ಖಾತೆ ಹಂಚಿಕೆ: ಬಜೆಟ್ ಬಳಿಕ ನಿಗಮ ಮಂಡಳಿ ನೇಮಕ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

Promotion

ಶಿವಮೊಗ್ಗ,ಫೆ,9,2020(www.justkannada.in): ನೂತನ ಸಚಿವರಿಗೆ ನಾಳೆ ಬೆಳಿಗ್ಗೆಯೇ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ,  ನಾಳೆ ಬೆಳಿಗ್ಗೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುತ್ತೇನೆ. ಬಜೆಟ್ ನಂತರ ನಿಗಮ ಮಂಡಳಿ ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದರು.

ಶಾಸಕ ಉಮೇಶ್ ಕತ್ತಿಗೆ ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಸಂಪುಟ ರಚನೆ ವೇಳೆಯೇ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕಿತ್ತು, ಅನಿವಾರ್ಯ ಕಾರಣದಿಂದ ಅವರಿಗೆ ಸಿಕ್ಕಿಲ್ಲ. ಸಂಫುಟ ವಿಸ್ತರಣೆ ಬಳಿಕ ನಮ್ಮ ಮನೆಗೆ ಬಂದಿದ್ದರು. ಅವರ ಜತೆ ಮಾತನಾಡಿದ್ದೇನೆ. ನಮ್ಮಲ್ಲಿ ಯಾವುದೇ ಗುಂಪು ಗೊಂದಲ ಇಲ್ಲ.  ಮುಂದಿನ ದಿನಗಳಲ್ಲಿ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

Key words: new minister- tomorrow –shivamogga- CM BS Yeddyurappa- clarified.