ನೂತನ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆ ಹಂಚಿಕೆ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

Promotion

ಬೆಂಗಳೂರು,ಆ,21,2019(www.justkannada.in)  ನೂತನ ಸಚಿವರಿಗೆ ನಾಳೆ ಅಥವಾ ನಾಡಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇಂದು ನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ ಶ್ರೀಗಳ ಜತೆ ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಅವರು  ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದೇನೆ.  ನಾಳೆ ಅಥವಾ ನಾಡಿದ್ದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು ಎಂದರು.

ನಿನ್ನೆ ಕೆಲ ಅನರ್ಹ ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿದ್ದರು. ಈ ವೇಳೆ ಅನರ್ಹ ಶಾಸಕರಿಗೆ ಸಿಎಂ ಬಿಎಸ್ ವೈ ಆಫರ್ ನೀಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಬಂದ 10 ದಿನದೊಳಗೆ ಸಂಪುಟ ವಿಸ್ತರಣೆ ಮಾಡುವುದಾಗಿ ಅನರ್ಹ ಶಾಸಕರಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಸಚಿವ ಸಂಪುಟ ರಚನೆ ಬಳಿಕ ಬಿಜೆಪಿಯಲ್ಲಿ ಶಾಸಕರ ಅಸಮಾಧಾನ ಸ್ಪೋಟಗೊಂಡಿದ್ದು ಸಚಿವಾಕಾಂಕ್ಷಿಗಳಾಗಿದ್ದ ಹಲವು ಶಾಸಕರು ತಮ್ಮ ಬೇಸರ ಹೊರ ಹಾಕಿದ್ದಾರೆ.

Key words: new ministers- Cabinet- expansion- CM BS Yeddyurappa -bangalore