ಮುಂದಿನ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನ ಗಳಿಸಬೇಕು: ನೀವೇ ಈ ಪಕ್ಷ ಉಳಿಸಬೇಕು- ಹೆಚ್.ಡಿ ದೇವೆಗೌಡರಿಂದ ಮನವಿ..

Promotion

ಬೆಂಗಳೂರು,ಫೆಬ್ರವರಿ,14,2021(www.justkannada.in): ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು.  ಜೊತೆಗೆ ಈ ರಾಜ್ಯದಲ್ಲಿ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸಬೇಕು ಅದು ನಿಮ್ಮಿಂದ ಮಾತ್ರ ಸಾಧ್ಯ  ಎಂದು ಜೆಡಿಎಸ್ ಕಾರ್ಯಕರ್ತರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮನವಿ ಮಾಡಿದರು.jk

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಸಮಾವೇಶವನ್ನು ಉದ್ಘಾಟಿಸಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೆಗೌಡ ಅವರು, ನಾನು ನಿಮಗೆ ಮಾರ್ಗದರ್ಶನ ಮಾಡಬಹುದು ಅಷ್ಟೇ. ಎಲ್ಲಾ ಕಡೆ ಪ್ರವಾಸ ಮಾಡಲು ಸಾಧ್ಯ ಆಗಲ್ಲ . ಹೀಗೆ ಮಾಡಿ ಎಂದು ನಾನು ಸಲಹೆ ಕೊಡಬಹುದು ಅಷ್ಷೆ. ನಮ್ಮಲ್ಲಿ ಪ್ರಬಲವಾದ ಘಟಕಗಳು ಇದೆ ಮುಂಬರುವ  ಕರ್ನಾಟಕದ ಜಿ.ಪ.,ತಾ.ಪ  ಚುನಾವಣೆ ನಮಗೆ ಬಹಳ ಮುಖ್ಯ.  ನಾವು ಹಿಂದೆ ಬಿದ್ದಿಲ್ಲ ಎಂದು ಸಾಬೀತು ಮಾಡಬೇಕಿದೆ ಎಂದರು.next elections- jds-win-work-party-former PM-HD Deve Gowda ..

ಈಗ ಬರುವ ಚುನಾವಣೆಯಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ . ಸೀಟು ಹಂಚುವಾಗ  ಸಣ್ಣ ಪುಟ್ಟ ವ್ಯತ್ಯಾಸ ಆಗಬಹುದು. ಅದರ ಬಗ್ಗೆ ದಯವಿಟ್ಟು ಯಾರು ತಲೆ ಕೆಡಿಸಿಕೊಳ್ಳಬೇಡಿ. ನಾವೆಲ್ಲರೂ ಐಕ್ಯತೆಯಿಂದ ಕೆಲಸ ಮಾಡಬೇಕಿದೆ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು ಜೊತೆಗೆ ಈ ರಾಜ್ಯದಲ್ಲಿ ನಮ್ಮ ಪ್ರಾದೇಶಿಕ ಪಕ್ಷವನ್ನು ಉಳಿಸಬೇಕು ಅದು ನಿಮ್ಮಿಂದ ಮಾತ್ರ ಸಾಧ್ಯ.  ನೀವೇ ಈ ಪಕ್ಷ ಉಳಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

Key words: next elections- jds-win-work-party-former PM-HD Deve Gowda ..