ಮುಂದಿನ ಬಾರಿ ವರುಣ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ….

ಮೈಸೂರು,ಆ,17,2020(www.justkannada.in): ಮುಂದಿನ ಚುನಾವಣೆಗೆ ನಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ.  ವರುಣ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.next-time-bjp-vice-president-by-vijayendra-meet-mp-shrinivas-prasad

ಮೈಸೂರಿನ ಜಯಲಕ್ಷ್ಮಿ ಪುರಂ ನಿವಾಸದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು. ಸಂಸದ ಶ್ರೀನಿವಾಸ್ ಪ್ರಸಾದ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಈ ವೇಳೆ ಮಾಜಿ ಸಚಿವ ವಿಜಯ ಶಂಕರ್, ಕಾಪು ಸಿದ್ದಲಿಂಗಸ್ವಾಮಿ ಸೇರಿದಂತೆ ಸ್ಥಳೀಯ ಮುಖಂಡರ ಸಾಥ್ ನೀಡಿದರು.

ಬಳಿಕ ಮಾತನಾಡಿದ ಬಿ.ವೈ ವಿಜಯೇಂದ್ರ, ವಿಜಯೇಂದ್ರನನ್ನು ರಾಜ್ಯಕ್ಕೆ ಪರಿಚಯಿಸಿದ್ದೇ ವರುಣ ಕ್ಷೇತ್ರ. ಆ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಾಗಬೇಕು. ನನ್ನನ್ನು ಯಡಿಯೂರಪ್ಪ ಅವರ ಮಗ, ಸಾಮಾನ್ಯ ವ್ಯಕ್ತಿ ಅಂತ ಗುರುತಿಸಲಾಗುತ್ತಿತ್ತು.  ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರ ನನ್ನನ್ನು ಗುರುತಿಸಿತು.  ಆ ಚುನವಣೆಯಲ್ಲಿ ನಾನು ಸ್ಪರ್ಧಿಸಲಿಲ್ಲ. ಅದಾಗ್ಯೂ ಅಲ್ಲಿನ ಜನ ತೋರಿದ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ನಾನು ಎಲ್ಲಿ ಸ್ಪರ್ಧಿಸಬೇಕು ಅಂತ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತೆ.  ವರುಣ ಕ್ಷೇತ್ರದಲ್ಲಿ ನನ್ನ ಸ್ಪರ್ಧೆ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ. ಪಕ್ಷದ ಉಪಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ಬಳಿಕ ವರುಣ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದೇನೆ ಎಂದರು.

ಸಂಸದ ವಿ. ಶ್ರೀನಿವಾಸಪ್ರಸಾದ್ ಹಿರಿಯ ನಾಯಕರಾಗಿದ್ದಾರೆ. ನಾನು ಅವರ ಮಾರ್ಗದರ್ಶನ ಪಡೆದುಕೊಳ್ಳುತ್ತೇನೆ. ಹಾಗಾಗಿ ಅವರ ನಿವಾಸಕ್ಕಿಂದು ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದೇನೆ. ಅವರನ್ನು ಭೇಟಿ ಮಾಡಿದ ವೇಳೆ ಯಾವುದೇ ರಾಜಕೀಯ ವಿಚಾರ ಚರ್ಚೆ ನಡೆದಿಲ್ಲ ಎಂದು ಬಿ. ವೈ ವಿಜಯೇಂದ್ರ ತಿಳಿಸಿದರು.

ಹೆಚ್. ವಿಶ್ವನಾಥ್ ಮಂತ್ರಿಸ್ಥಾನ ನೀಡುವ ವಿಚಾರ: ಸಿಎಂ ತೀರ್ಮಾನ…

ವಿಶ್ವನಾಥ್ ಅವರಿಗೆ ಮಂತ್ರಿ ಸ್ಥಾನ ನೀಡುವ ವಿಚಾರವೂ ಪ್ರಸ್ತಾಪವಾಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಮಾಡಲಿದ್ದಾರೆ. ವಿಶ್ವನಾಥ್ ಅವರು ತ್ಯಾಗ ಮಾಡಿ ಬಿಜೆಪಿಗೆ ಬಂದಿದ್ದಾರೆ. ಈಗಲೂ ನನ್ನ ತಂದೆಯ ಜೊತೆಗಿದ್ದಾರೆ. ನಾನು ಮೈಸೂರಿಗೆ ಬಂದಾಗಲೆಲ್ಲಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುತ್ತೇನೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಮಂಡ್ಯ ಜಿಲ್ಲೆಯ ರೈತರ ಬಗ್ಗೆ ಸಿಎಂ ಯಡಿಯೂರಪ್ಪ ಹೆಚ್ಚಿನ ಒಲವು ಹೊಂದಿದ್ದಾರೆ. ಆದಷ್ಟು ಬೇಗ ಮೈ ಶುಗರ್ಸ್ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವ ಚಿಂತನೆಯಲ್ಲಿದ್ದಾರೆ. ಆದರೆ ಇದಕ್ಕೆ ಕೊರೊ‌‌ನಾ ಅಡ್ಡಿಯಾಗಿದೆ. ಶೀಘ್ರದಲ್ಲೇ ಪಿಎಸ್‌ಎಸ್‌ಕೆ ಮಾದರಿಯಲ್ಲೇ ಮೈಶುಗರ್ಸ್ ಪು‌ನರಾರಂಭವಾಗಲಿದೆ. ಇದೇ ರೀತಿ ಶ್ರೀರಾಮ ಸಕ್ಕರೆ ಕಾರ್ಖಾನೆ ಕೂಡ ಪು‌ನರ್ ಆರಂಭವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದರು.

Key words:  next time- BJP – vice president -BY Vijayendra-meet- MP- Shrinivas prasad