ಮುಂದಿನ ಬಾರಿಯೂ ಸಿದ್ಧರಾಮಯ್ಯರನ್ನ ವಿಪಕ್ಷ ಸ್ಥಾನದಲ್ಲಿ ಕೂರಿಸದಿದ್ರೆ ನಾನು ಯಡಿಯೂರಪ್ಪನೇ ಅಲ್ಲ-ಸಿಎಂ ಬಿಎಸ್ ವೈ ಸವಾಲು..

Promotion

ಬೆಂಗಳೂರು,ಮಾರ್ಚ್,8,2021(www.justkannada.in): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130 ರಿಂದ 135 ಸ್ಥಾನ ಗೆಲ್ಲುತ್ತೇವೆ. ಮುಂದಿನ ಬಾರಿಯೂ ಸಿದ್ಧರಾಮಯ್ಯರನ್ನ ವಿಪಕ್ಷ ಸ್ಥಾನದಲ್ಲಿ ಕೂರಿಸುತ್ತೇವೆ. ಅವರನ್ನ ವಿಪಕ್ಷ ಸ್ಥಾನದಲ್ಲಿ ಕೂರಿಸದಿದ್ದರೇ ನಾನು ಯಡಿಯೂರಪ್ಪನೇ ಅಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.jk

ರಾಜ್ಯ ಬಜೆಟ್ ಮಂಡನೆ ಬಳಿಕ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಬಿಎಸ್ ವೈ, ಎಂಟನೇ ಬಾರಿಗೆ ಬಜೆಟ್ ಮಂಡಿಸಿದ್ದೇನೆ. ಕೊರೋನಾ ಸಂಕಷ್ಟ ಸಮಯದಲ್ಲಿ ಮಂಡಿಸಿದ ಬಜೆಟ್ ಇದಾಗಿದೆ.‌ ಕೊರೊನಾ ಹೊಡೆತದಿಂದ ಆರ್ಥಿಕ ಸಂಕಷ್ಟದ ನಡುವೆ ಧೃತಿಗೆಡದೆ ಅಭಿವೃದ್ಧಿ ಪೂರಕ ಬಜೆಟ್ ಮಂಡಿಸಿದ್ದೇನೆ. ಸಿಎಂ. ವಿತ್ತೀಯ ಶಿಸ್ತು ಕಾಪಾಡುವ ಜತೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಜನಕಲ್ಯಾಣ ಕಾರ್ಯಕ್ರಮ ಹಾಗೂ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸಮತೋಲಿತ ಬಜೆಟ್ ಮಂಡಿಸಿದ್ದೇನೆ ಎಂದರು.

ಸಮಾಜದ ಎಲ್ಲ ವಲಯ, ಜಿಲ್ಲೆಗಳಿಗೆ ಸಮಾನ ಅವಕಾಶ ನೀಡಲಾಗಿದೆ. ಮಹಿಳೆಯರ ಸ್ವಾವಲಂಬನೆ, ಸುರಕ್ಷತೆ ಮತ್ತು ಉದ್ಯಮಶೀಲತೆಗೆ ಒತ್ತು ನೀಡಲಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಎಲ್ಲ ಕಾರ್ಯಕ್ರಮಗಳು ಮುಂದುವರೆಯಲಿದ್ದು ಯಾವುದೇ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿಲ್ಲ ಎಂದು ಸಿಎಂ ಬಿಎಸ್ ವೈ ನುಡಿದರು.

ಪ್ರತಿಕೂಲ ಪರಿಸ್ಥಿತಿಯಲ್ಲಿ ಸರ್ವವ್ಯಾಪಿ ಸರ್ವಸ್ಪರ್ಶಿ ಬಜೆಟ್ ಇದಾಗಿದೆ. ಯಾರಿಗೂ ಹೊರೆಯಾಗದ ಜನಪ್ರಿಯ ಬಜೆಟ್ ಮಂಡನೆಯಾಗಿದೆ. ಸಂಕಷ್ಟದ ಸಂದರ್ಭದಲ್ಲಿ ಒಂದು ಪೈಸೆ ಹೆಚ್ಚುವರಿ ತೆರಿಗೆ ಹಾಕದೆ ಬಜೆಟ್ ಮಂಡಿಸಲಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ತೈಲ‌ ಬೆಲೆ ಕಡಿಮೆ ಇದೆ. ಯಾವುದೇ ಹೆಚ್ಚುವರಿ ತೆರಿಗೆ ಹಾಕಲಾಗಿಲ್ಲ. ಯಾರಿಗೂ ಹೊರೆಯಾಗದ ಜನಸ್ನೇಹಿ ಬಜೆಟ್ ಮಂಡನೆ ಮಾಡಿದ್ದೇವೆ. ಯಾರಮೇಲೂ ಒಂದು ಪೈಸೆ ಹೆಚ್ಚುವರಿ ಹೊರೆ ಹಾಕಿಲ್ಲ. ಸಮತೋಲನ ಕಾಪಾಡಿಕೊಳ್ಙಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದು ಸಿಎಂ ಬಿಎಸ್ ವೈ ಹೇಳಿದರು.

 ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ ಮಾಡಿದ್ದಕ್ಕೆ ಕಿಡಿ…

ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ ಮಾಡಿದ್ದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ ಸಿಎಂ ಯಡಿಯೂರಪ್ಪ. ಬಜೆಟ್ ಮಂಡನೆ ವೇಳೆ ಸಭಾತ್ಯಾಗ ಮಾಡಿರುವುದು ಇತಿಹಾಸದಲ್ಲೇ ಮೊದಲು.‌ ಸಿದ್ದರಾಮಯ್ಯ‌ ನೈತಿಕತೆ ಏನು ಎಂಬುದನ್ನು ಚರ್ಚೆ ಮಾಡೋಣ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲುವ ಮೂಲಕ‌ ಸಿದ್ದರಾಮಯ್ಯರನ್ನು ಪ್ರತಿಪಕ್ಷದಲ್ಲಿ ಕೂರುವಂತೆ ಮಾಡದಿದ್ದರೆ ನನ್ನನ್ನು ಯಡಿಯೂರಪ್ಪ ಅಂತಾ ಕರೀಬೇಡಿ ಎಂದು ಸವಾಲು ಹಾಕಿದರು.

Key words: next time -Siddaramaiah – opposition party- CM BS yeddyurappa-challenge.