ಮುಂಬರುವ ಶೈಕ್ಷಣಿಕ ವರ್ಷ ಮತ್ತು ಪಠ್ಯಕ್ರಮದ ಬಗ್ಗೆ ಮುಂದಿನ ವಾರ ನಿರ್ಧಾರ….

Promotion

ಮೈಸೂರು,ಮಾ,29,2020(www.justkannada.in):  ಮುಂಬರುವ ಶೈಕ್ಷಣಿಕ ವರ್ಷವನ್ನು ಯಾವಾಗ ಆರಂಭಿಸಬೇಕು. ಪಠ್ಯ ಕ್ರಮ ಯಾವ ರೀತಿ ಇರಬೇಕು ಎಂಬುದನ್ನು ಮುಂದಿನ ವಾರ ನಿರ್ಧಾರ ಮಾಡುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಚಿವ ಸುರೇಶ್ ಕುಮಾರ್, ಇದು ವಿಭಿನ್ನ ವರ್ಷವಾಗಿದೆ, 2020 ಕೊರೊನಾ ವರ್ಷವಾಗಿದೆ. ಪರಿಣಾಮ ಎಲ್ಲಾ ವರ್ಗಗಳು ಜರ್ಝರಿತವಾಗಿವೆ. ಹಾಗಾಗಿ ಯಾವುದೇ ಶಿಕ್ಷಣ ಸಂಸ್ಥೆಗಳು ಶುಲ್ಕ ಹೆಚ್ಚಳ ಮಾಡಬಾರದು. ಮಾನವೀಯ ದೃಷ್ಟಿಯಿಂದ ನೋಡಬೇಕು. ಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಶುಲ್ಕ ಹೆಚ್ಚಳ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದರು.

ಶಿಕ್ಷಣ ವ್ಯವಸ್ಥೆಯ ಮೇಲೆ ಕೊರೊನಾ ಭಾರೀ ಪರಿಣಾಮ ಬೀರಿದೆ. ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭವಾಗಿದ್ದು, ಜುಲೈ 20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಬರುವ ಸಾಧ್ಯತೆಯಿದೆ. ಜುಲೈ ಅಂತ್ಯಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಬರಲಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

Key words: Next week- decision – upcoming- academic year – curriculum-minister- suresh kumar