ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ತಡೆ ನೀಡಿದ ಕೋರ್ಟ್…

ನವದೆಹಲಿ,ಜ,31,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಮತ್ತೆ ತಾತ್ಕಾಲಿಕ ಜೀವದಾನ ಸಿಕ್ಕಂತಾಗಿದೆ. ನಾಲ್ವರು ಅಪರಾಧಿಗಳ ಗಲ್ಲುಶಿಕ್ಷೆ ಜಾರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ತಡೆ ನೀಡಿದೆ.

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಾದ ಪವನ್ ಗುಪ್ತ, ವಿನಯ್ ಶರ್ಮಾ, ಅಕ್ಷಯ್ ಮುಖೇಶ್ ಗೆ ನಾಳೆಗೆ ಗಲ್ಲುಶಿಕ್ಷೆ ಜಾರಿಗೆ ದಿನಾಂಕ ನಿಗದಿಯಾಗಿತ್ತು. ಆದರೆ ಅಪರಾಧಿ ವಿನಯ್ ಶರ್ಮಾ ಸಲ್ಲಿಸಿದ್ದ ಕ್ಷಮದಾನ ಅರ್ಜಿ ಬಾಕಿ ಹಿನ್ನೆಲೆ ಡೆತ್ ವಾರೆಂಟ್ ಗೆ ದೆಹಲಿ ಪಟಿಯಾಲ ಹೌಸ್ ಕೋರ್ಟ್ ತಡೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಂದಿನ ಆದೇಶದವರೆಗೂ ಗಲ್ಲುಶಿಕ್ಷೆ ಜಾರಿ ವಿಧಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ.

ಇನ್ನೊಂದೆಡೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಪವನ್ ಗುಪ್ತಾ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ನಡುವೆ, ದೋಷಿ ಪವನ್ ಗುಪ್ತ ನಿರ್ಭಯಾ ಪ್ರಕರಣದ ವೇಳೆ ತಾನು ಬಾಲಾಪರಾಧಿಯಾಗಿದ್ದೆ ಎಂದು ಸುಪ್ರೀಂಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದ. ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

Key words: Nirbhaya- gang rape- murder- case-dehli court-stay- Death Warrant