ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣ: ನಾಲ್ವರು ಅಪರಾಧಿಗಳಿಗೆ ನಾಳೆಯೇ ಗಲ್ಲುಶಿಕ್ಷೆ ಜಾರಿ…

Promotion

ಮೈಸೂರು,ಮಾ,19,2020(www.justkannada.in): ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ನಾಳೆಯೇ ಗಲ್ಲುಶಿಕ್ಷೆ ಜಾರಿಯಾಗಲಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮೂಲಕ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್, ಪವನ್ ಗುಪ್ತ, ವಿನಯ್ ಶರ್ಮಾ, ಅಕ್ಷಯ್ ಕುಮಾರ್ ಗೆ ನಾಳೆ ಬೆಳಿಗ್ಗೆ 5.30ಕ್ಕೆ ಗಲ್ಲುಶಿಕ್ಷೆ ಜಾರಿಯಾಗಲಿದೆ.

ಅಪರಾಧಿಗಳು ಪದೇ ಪದೇ ಕಾನೂನಿನ ಲಾಭವನ್ನು ಪಡೆದು ಮರಣದಂಡನೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು. ಹಾಗಾಗಿ ಅವರ ಮರಣದಂಡನೆಯನ್ನು ಇಲ್ಲಿಯವರೆಗೆ ಮೂರು ಬಾರಿ ಮುಂದೂಡಲಾಗಿತ್ತು. ನಾಲ್ಕು ಬಾರಿ ಡೆತ್ ವಾರೆಮಟ್ ಹೊರಡಿಸಲಾಗಿತ್ತು. ಇದೀಗ ನಾಳೆ ನಾಲ್ವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ಫಿಕ್ಸ್ ಆಗಿದೆ.

Key words: Nirbhaya- gang rape- murder case-Four- criminals- death- sentenced -tomorrow.